Breaking News

ಶಾಸಕ ಶಿವರಾಮ ಹೆಬ್ಬಾರ್ – ಮಾಜಿ ರಾಜ್ಯಾಪಾಲರಾದ ಮಾರ್ಗರೇಟ್ ಆಳ್ವ ಭೇಟಿ-ಮಾತುಕತೆ

ಯಲ್ಲಾಪುರ, ಮಾರ್ಚ್ 14 : ಮಾಜಿ ಸಂಸದರು ಹಾಗೂ ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವಾ ಅವರು ನಿನ್ನೆ ಅನ್ಯ ಕಾರ್ಯಕ್ರಮದ ನಿಮಿತ್ತ ಯಲ್ಲಾಪುರ ಪಟ್ಟಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಅವರನ್ನು ಭೇಟಿಯಾಗಿ ಆತ್ಮೀಯವಾಗಿ ಸ್ವಾಗತಿಸಿದರು.

ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಮಾರ್ಗರೇಟ್ ಆಳ್ವಾ ಅವರಿಗೆ ಶಾಲು ಹೊದಿಸಿ ಗೌರವಪೂರ್ವಕವಾಗಿ ಸನ್ಮಾನಿಸಿ, ಅವರ ಆರೋಗ್ಯ ಹಾಗೂ ಕ್ಷೇಮವನ್ನು ವಿಚಾರಿಸಿದರು. ಇದೇ ವೇಳೆ ವಿವಿಧ ಸಮಕಾಲೀನ ವಿಚಾರಗಳ ಬಗ್ಗೆ ಸಂಕ್ಷಿಪ್ತವಾಗಿ ಮಾತುಕತೆ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಾಯಿನಾಥ್ ಗಾಂವ್ಕರ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ವಿ.ಎಸ್.ಭಟ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಲಾರೆನ್ಸ್ ಸಿದ್ಧಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? ಇಲ್ಲಿದೆ ಅದಕ್ಕೆ ಸರಿಯಾದ ಮಾಹಿತಿ.

ಬೆಳಗಿನಿಂದ ಅನೇಕರದ್ದು ಒಂದೇ ಪ್ರಶ್ನೆ – ‘ಈ ಸಂವತ್ಸರಕ್ಕೆ ‘ಪರಾಭವ’ ಎಂಬ ಹೆಸರೇಕೆ ? ಪರಾಭವ ಅಂದ್ರೆ ಸೋಲು ಅಂತ …

Leave a Reply

Your email address will not be published. Required fields are marked *