Breaking News

ಯಲ್ಲಾಪುರದ ತಾಲ್ಲೂಕು ಆಡಳಿತ ಹಾಗು ಸಮಾಜಕಲ್ಯಾಣ ಇಲಾಖೆ ಅಡಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ.

ಪ್ರತಿಧ್ವನಿ ಯಲ್ಲಾಪುರ :ಭವ್ಯ ಭಾರತದ ಬೃಹತ್ ಪ್ರಜಾಪ್ರಭುತ್ವಕ್ಕೆ ಸಂವಿಧಾನ ನೀಡಿದ ಮಹಾ ಚೇತನ, ಜಗತ್ತಿನ ಎಲ್ಲಾ ದೇಶಗಳ ಒಳಿತನ್ನು ಆರಿಸಿ ಭಾರತ ನೆಲದ ಜೀವನ ಪದ್ದತಿಗೆ ಅನುಕೂಲ ಆಗುವಂತಹ ಮತ್ತು ದಮನಿತರ ಬದುಕು ಹಸನಾಗಿಸಲು ಸಂವಿಧಾನ ನೀಡಿದ ಮಹಾ ನಾಯಕ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಅವರ ಜೀವನ ಶ್ರದ್ದೆ ಬದುಕಿನ ಪಥ ಅನುಕರಣೀಯ ಹಾಗು ಪ್ರಸ್ತುತ ಪೀಳಿಗೆಗೆ ಪ್ರೇರಣಾದಾಯಕ ವ್ಯಕ್ತಿತ್ವ. ಅಂತಹ ಮಹನೀಯರ ಜಯಂತಿ ಆಚರಣೆ ಅರ್ಥಪೂರ್ಣ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ  ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಏ,14 ರ ಮಂಗಳವಾರ ದಂದು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪಟ್ಟಣದ ಗಾಂಧಿ ಕುಟೀರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಪೂಜಿಸಿ ಮೆರವಣಿಗೆಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್. ಕೆ. ಭಟ್, ತಹಶೀಲ್ದಾರರಾದ ಚಂದ್ರಶೇಖರ ಹೊಸಮನಿ, ತಾಲ್ಲೂಕು ಪಂಚಾಯತ ಇಒ ರಾಜೇಶ್ ಧನವಾಡಕರ್,ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಲೋಕೇಶ್ ಪಾಟಣಕರ್,   ತೊಗಲು ಹರಳಯ್ಯ ಟ್ರಸ್ಟ್ ಅಧ್ಯಕ್ಷ ಜಗನ್ನಾಥ ರೇವಣಕರ್ ಪ್ರಮುಖರಾದ ಶಾಮಲಿ ಪಾಟಣಕರ್, ಮಾರುತಿ ಬೋವಿ ವಡ್ಡರ್, ಕಲ್ಲಪ್ಪ ಹೊಳಿ, ರವಿ ಪಾಟಣಕರ್,  ಗಣೇಶ ಪಾಟಣಕರ್, ಅನಿಲ್ ಮರಾಠಿ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ತ್ಯಾಗ ಮತ್ತು ಸೇವೆ ಭಾರತಿಯ ಚಿಂತನೆಯ ಅಂತರಂಗ – ಅರುಣ್ ಕುಮಾರ್ ಜಿ..

ಪ್ರತಿಧ್ವನಿ ಯಲ್ಲಾಪುರ:ಭಾರತೀಯ ಜೀವನ ಪದ್ಧತಿಯ ತಿರುಳು ತ್ಯಾಗ ಮತ್ತು ಸೇವೆ. ನಮ್ಮ ಜೀವನ ಅದಕ್ಕಾಗಿ ಮುಡಿಪಿರಬೇಕು ಎಂದು ರಾಷ್ಟ್ರೀಯ ಸವಯಂಸೇವಕ …

Leave a Reply

Your email address will not be published. Required fields are marked *