Breaking News

ಯಲ್ಲಾಪುರದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ, ಯಲ್ಲಾಪುರ- ಪಟ್ಟಣದ ಪ್ರಮುಖ ವೃತ್ತದಲ್ಲಿ ಒಂದಾದ ಬಸ್ ನಿಲ್ದಾಣ ಸಮೀಪದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ,ಬಾಬ ಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಅಂಬೇಡ್ಕರ್ ಸೇವಾ ಸಮಿತಿ ಮತ್ತು ವಿವಿಧ ದಲಿತಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಸಚಿವ ಶಿವರಾಮ ಹೆಬ್ಬಾರ್ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಡಾ,ಬಾಬ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ್ ಗುರುರಾಜ್ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸಂಗನ ಬಸಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ್ ನಾಯ್ಕ್ ವಿವಿಧ ಸಂಘಟನೆಗಳ ಪ್ರಮುಖರು ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *