Breaking News

ಯಲ್ಲಾಪುರ ತಹಶಿಲ್ದಾರ್ ಕಚೇರಿಯಲ್ಲಿ ಸರಳವಾಗಿ ಆಚರಿಸಿದ ಡಾ,ಬಾಬ ಸಾಹೇಬ್ ಅಂಬೇಡ್ಕರ್ ಜಯಂತಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಜಗನ್ನಾಥ್ ರೇವಣ್ಕರ್ ಮತ್ತು ತಹಶಿಲ್ದಾರ ಗುರುರಾಜ್ ಸಂವಿಧಾನ ಶಿಲ್ಪಿ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಜಗಜೀವನ್ಬರಂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಪ್ರತಿಧ್ವನಿ,ಯಲ್ಲಾಪುರ-ಪಟ್ಟಣದ ತಹಶಿಲ್ದಾರ್ ಕಚೇರಿಯಲ್ಲಿ ಅತ್ಯಂತ ಸರಳವಾಗಿ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೆಬ್ ಅಂಬೇಡ್ಕರ್ ಜಯಂತಿ ಹಾಗು ಬಾಬು ಜಗಜೀವನರಾಮ್ ಆಚರಿಸಲಾಯಿತು.

ಭೂ ಮಂಡಲದಲ್ಲಿ ಸೂರ್ಯ ಚಂದ್ರ ಇರೋವರೆಗು ಭಾರತದ ಮಹಾನ್ ಚೇತನ ಅಂಬೇಡ್ಕರ್ ಅವರ ಹೆಸರು ವಿಚಾರ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ತಹಶಿಲ್ದಾರ ಗುರುರಾಜ್ ಹೇಳಿದರು.

ಜಗತ್ತಿನ ಮಹಾನ್ ನಾಯಕರ ಜಯಂತಿ ಆಚರಿಸುವುದರೊಂದಿಗೆ ಅವರ ತತ್ವ ಆದರ್ಶಗಳನ್ನು ಪಾಲಿಸಬೇಕಿದೆ. ಮತ್ತು ಪ್ರಸ್ತುತ ಸಮಜಕ್ಕೆ ಅವರ ಮಾರ್ಗದರ್ಶನ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಶಿಕ್ಷಕ ಡಾ,ನವೀನ್ ಕುಮಾರ್ ಉಪನ್ಯಾಸ ನೀಡಿದರು.

ತಾಲೂಕು ಪಂಚಾಯತ್ ಕರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸಂಗನಬಸಯ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ವಿವಿಧ ಇಲಾಖೆಗಳ ಪ್ರಮುಖರು ಸಂಘ ಸಂಸ್ಥೆಗಳು ಹಾಗು ಸಾರ್ವಜನಿಕರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಹುಟಕಮನೆ ಗುಡ್ಡ ನೆಲಸಮ ಪ್ರಕರಣ ನ್ಯಾಯಾಲಯಲ್ಲಿರುವಂತೆಯೆ ಮಾರಾಟಕ್ಕೆ ತೆರೆಮರೆಯ ಯತ್ನ.!!

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಸದ್ದುಮಾಡಿ ಬೆಂಗಳೂರಿನ ಭೂ ವ್ಯಾಜ್ಯಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ ಹುಟಕಮನೆ ಗುಡ್ಡ ನೆಲಸಮ ಅರಣ್ಯನಾಶ …

Leave a Reply

Your email address will not be published. Required fields are marked *