

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ಬಹು ದಶಕಗಳ ಉತ್ತರಕನ್ನಡ ಜಿಲ್ಲೆಯ ಅತ್ಯಂತ ಪ್ರಮುಖ ಕನಸುಗಳಲ್ಲಿ ಒಂದಾದ ಹುಬ್ಬಳ್ಳಿ – ಅಂಕೋಲಾ ರೈಲ್ವೆ ಮಾರ್ಗದ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯಿಂದ ತಾಲೂಕಿನ ವಿವಿಧ ಭಾಗದಲ್ಲಿ ಪರಿಶೀಲಿಸಲು ಮತ್ತೊಮ್ಮೆ ತಜ್ಞರ ತಂಡ ಯಲ್ಲಾಪುರ ತಾಲೂಕಿಗೆ ಆಗಮಿಸಿದ್ದು ಕಮರುತ್ತಿರುವ ಕನಸಿಗೆ ಮತ್ತೆ ಚಿಗುರುವ ಆಸೆ ಮೂಡಿದೆ.

ಭಾರತೀಯ ರೈಲ್ವೆ ವಿಭಾಗದ ಜನರಲ್ ಮ್ಯಾನೇಜರ್ ಕಿಶೋರ್ ಕುಮಾರ್ ಅವರ ನೇತೃತ್ವದಲ್ಲಿ ಯಲ್ಲಾಪುರ ತಾಲೂಕಿನ ವಿವಿದೆಡೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಬುಧವಾರ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಡೋಮಗೇರಿ ಕ್ರಾಸ್ ಬಳಿ ಪರಿಶೀಲನೆ ನಡೆಸುತ್ತಿದ್ದ ವೇಳೆ ಸ್ಥಳಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಕಿಶೋರ್ ಕುಮಾರ್ ಅವರ ನೇತೃತ್ವದ ತಂಡವನ್ನು ಗೌರವಿಸಿ ಸನ್ಮಾನಿಸಿದರು.



ರೈಲ್ವೆ ಯೋಜನೆಯ ಅನುಕೂಲಗಳನ್ನು ವಿವರಿಸಿ ಆನೆ ಕಾರಿಡಾರ್ ನಿರ್ಮಾಣದ ಬಗ್ಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಎಸಿಎಫ್‌ಗಳಾದ ಹಿಮವತಿ ಭಟ್ಟ, ಆನಂದ ಎಚ್.ಎ ಹಾಗೂ ಇಡಗುಂದಿ, ಮಂಚೀಕೇರಿ ವಲಯ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.






Prathidvani Yellapura