





ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೆ ಜಯಂತಿ ಕಾರ್ಯಕ್ರಮ ಅತ್ಯಂತ ಶ್ರದ್ಧೆಯಿಂದ ಭಾವಪೂರ್ಣವಾಗಿ ಆಚರಿಸಲಾಯಿತು.

ತಾಲೂಕು ದಂಡಾಧಿಕಾರಿ ತನುಜ ಸವದತ್ತಿ ಮತ್ತು ಅ.ಸೇ.ಸ. ಅಧ್ಯಕ್ಷ ಜಗನ್ನಾಥ ರೇವಣಕರ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಪುಷ್ಪ ನಮನ ಸಲ್ಲಿಸಿದರು.

ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಭಾರತ ದೇಶಕ್ಕೆ ಅಂಬೇಡ್ಕರ್ ಅವರು ನೀಡಿದ ಸಂವಿಧಾನವೆಂಬ ಪವಿತ್ರ ಗ್ರಂಥದ ಬಲದಲ್ಲೆ ದೇಶ ಮುಂದುವರೆಯುತ್ತಿದೆ ಹಾಗು ವಿಶ್ವಗುರು ಸ್ಥಾನದಲ್ಲಿದೆಬ ಅವರ ಆದರ್ಶಗಳನ್ನು ಪಾಲಿಸೋಣ ಎಂದರು.

ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ್ ಹೆಗಡೆ ಸೇರಿದಂತೆ ಬಿಜೆಪಿಯ ಪ್ರಮುಖರಾದ ಶಾಮಲಿ ಪಾಟಣ್ಕರ್, ನರಸಿಂಹ ಕೋಣೆಮನೆ, ಹಂಡ್ರಮನೆ ಗೋಪಾಲಕೃಷ್ಣ ಭಟ್ಟ, ಗಣಪತಿ ಬೋಳಗುಡ್ಡೆ ಇನ್ನಿತರ ಪ್ರಮುಖರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ.ಭಟ್ಟ ಮೆಣಸುಪಾಲ್, ಮಾಜಿ ಅಧ್ಯಕ್ಷ ವಿ.ಎಸ್.ಭಟ್ಟ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಉಲ್ಲಾಸ್ ಶಾನಬಾಗ್, ಅನಿಲ್ ಮರಾಠೆ ಇನ್ನಿತರ ಪ್ರಮುಖರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಹೆಬ್ಬಾರ್ ಸೇರಿದಂತೆ ಪ್ರಮುಖರಿಗೆ,ಹಿರಿಯ ಅಧಿಕಾರಿಗಳಿಗೆ, ಪತ್ರಕರ್ತರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಅಂಬೇಡ್ಕರ್ ಜಯಂತಿ ಪ್ರಯುಕ್ತ ಅನ್ನದಾನದ ವ್ಯವಸ್ಥೆ ಮಾಡಲಾಗಿತ್ತು ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡರು.
ಸಂಘಟನೆಯ ಪ್ರಮುಖ ಮಾರುತಿ ಬಿ ವಡ್ಡರ್ ನೇತೃತ್ವದಲ್ಲಿ ಜಗನ್ನಾಥ ರೇವಣಕರ ಮಾರ್ಗದರ್ಶನದಲ್ಲಿ ರವಿ ಪಾಟಣ್ಕರ್, ಸಂತೋಷ್ ಪಾಟಣ್ಕರ್, ಅನಿಲ್ ಜೋಗಳೇಕರ್, ಅಶೋಕ ಕೊರವರ, ಶಂಕರ ನಾಯಕ್, ಕಲ್ಲಪ್ಪ, ಪೂಜಾ ನೇತ್ರೇಕರ್, ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು ಕೇಬಲ್ ನಾಗೇಶ್ ಸ್ವಾಗತಿಸಿ ನಿರೂಪಿಸಿ ವಂದಿಸಿದರು.
Prathidvani Yellapura