
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ಕೇವಲ ಒಂದು ಸಮುದಾಯಕ್ಕೆ ಸೀಮಿತರಾಗದೆ ವಿಶ್ವಕ್ಕೆ ಮನುಕುಲದ ಸಮಾನತೆಯ ಸಂದೇಶ ಸಾರಿದ ಮಹಾನ್ ಪುರುಷ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರಾಗಿದ್ದು ಪ್ರತಿ ಭಾರತೀಯರ ಪ್ರೇರಣಾ ಪುರುಷರಾಗಿದ್ದಾರೆ. ಡಾ, ಬಾಬು ಜಗಜೀವನರಾಮ್ ಜೀವನ ನಮ್ಮೆಲ್ಲರಿಗು ಪ್ರೇರಣೆ ಜಾತ್ಯಾತೀತ ವ್ಯವಸ್ಥೆಯಲ್ಲಿ ಜಗತ್ತಿಗೆ ಭಾರತವನ್ನು ತೆರೆದಿಟ್ಟ ಮಹಾನ್ ಚೇತನರ ಕಾರ್ಯಗಳು ನಮಗೆ ಆದರ್ಶವಾಗಲಿ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಪಟ್ಟಣದ ಗಾಂಧಿ ಕುಟಿರದಲ್ಲಿ ನಡೆದ ಡಾ,ಬಿ.ಆರ್, ಅಂಬೇಡ್ಕರ್ ಅವರ 134 ನೆ ಜಯಂತಿ ಆಚರಣೆಯ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.



ವೇದಿಕೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವಿಸಿ ಸನ್ಮಾನಿಸಲಾಯಿತು.

ಡಾ,ಬಿ.ಆರ್.ಅಂಬೇಡ್ಕರ್ ಮತ್ತು ಡಾ,ಬಾಬು ಜಗಜೀವನರಾಮ್ ಅವರ ಕುರಿತಂತೆ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಪ್ರಾಂಶುಪಾಲ ಡಿ.ಕೆ.ಗಾಂವ್ಕರ್ ಮತ್ತು ಶಿಕ್ಷಕ ನವೀನ್ ಕುಮಾರ್ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ತಹಶಿಲ್ದಾರ ಯಲ್ಲಪ್ಪ ಗೊಣೆಣ್ಣವರ, ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಲೋಕೇಶ್ ಪಾಟಣಕರ, ಪಟ್ಟಣ ಪಂಚಾಯತ ಉಪಾಧ್ಯಕ್ಷ ಅಮಿತ್ ಅಂಗಡಿ, ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಜೇಶ್ ಧನವಾಡಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಮಚಂದ್ರ ಗೋಳಾ, ಭೋವಿ ಸಮಾಜದ ಪ್ರಮುಖ ಪಕೀರಪ್ಪ ಭೋವಿ ವಡ್ಡರ್, ಪ.ಪಂ. ಮಾಜಿ ಉಪಾಧ್ಯಕ್ಷೆ ಶಾಮಲಿಪಾಟಣ್ಕರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ.ಭಟ್ ಮೆಣಸುಪಾಲ್ ಉಪಸ್ಥಿತರಿದ್ದರು.


ವಿದ್ಯಾರ್ಥಿನಿಯರು ಪ್ರಾರ್ಥಿಸಿ ನಾಡಗೀತೆ ಹಾಡಿದರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜೆ.ಬಿ.ನರೊಟ್ಟಿ ಸ್ವಾಗತಿಸಿದರು. ಶಿಕ್ಷಕ ಚಂದ್ರಹಾಸ ನಾಯ್ಕ ನಿರೂಪಿಸಿದರು.

ಇದಕ್ಕು ಮುನ್ನ ಪಟ್ಟಣದ ಗಾಂಧಿ ಕುಟಿರದಿಂದ ಸಂವಿಧಾನ ಶಿಲ್ಪಿ ಡಾ||ಬಿಆರ್. ಅಂಬೇಡ್ಕರ್ ಮತ್ತು ಡಾ|| ಬಾಬು ಜಗಜೀವನರಾಮ್ ಜಯಂತಿ ಪ್ರಯುಕ್ತ ಮೆರವಣಿಗೆ ಆಯೋಜಿಸಲಾಗಿತ್ತು.



ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರು ಅಂಬೇಡ್ಕರ್ ಮತ್ತು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆಗೈದು ಅಂಬೇಡ್ಕರ್ ಭಾವಚಿತ್ರ ಹೊತ್ತ ವಾಹನವನ್ನು ತಾವೆ ಚಾಲನೆ ಮಾಡುವ ಮೂಲಕ ಉದ್ಘಾಟಿಸಿದರು.




ಮೆರವಣಿಗೆಯು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಾಗಿ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ಅಂಬೇಡ್ಕರ್ ಸೇವಾ ಸಂಘ ಮತ್ತು ವಿವಿಧ ಸಂಘಟನೆಗಳ ಅಡಿಯಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಮತ್ತು ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಸೇರಿದಂತೆ ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಲೋಕೇಶ್ ಪಾಟಣಕರ ವಿವಿಧ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ಮುಂದೆ ಸಾಗಿ ಗಾಂಧಿ ಕುಟಿರದಲ್ಲಿ ಸಮಾಪ್ತಿಯಾಯಿತು.




Prathidvani Yellapura