Breaking News

ಹರಳಯ್ಯ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಮ್  ಜಯಂತಿ ಆಚರಣೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಯಲ್ಲಾಪುರ : ಪಟ್ಟಣದ ಶಾರದಾಗಲ್ಲಿ ಅಂಬೇಡ್ಕರ್ ಭವನದಲ್ಲಿ ಹರಳಯ್ಯ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾವ್ ಅವರ ಜಯಂತಿಯನ್ನು ಭಕ್ತಿ-ಭಾವಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ  ಲೋಕೇಶ್ ಪಾಟಣಕರ್ ಹಾಗೂ ಯಲ್ಲಾಪುರದ ನಿವೃತ್ತ ತಹಶೀಲ್ದಾರ್  ತುಳಸಿ ಪಾಲೇಕರ್ ಅವರಿಗೆ ಸನ್ಮಾನ ಮಾಡಲಾಯಿತು.

ವೇದಿಕೆಯಲ್ಲಿ ಅಂ.ಸೇ.ಸಂ ಅಧ್ಯಕ್ಷ ಲೋಕೇಶ್ ಪಾಟಣಕರ್, ಉಪಾಧ್ಯಕ್ಷ ಅನಿಲ್ ಮರಾಠೆ, ಕಾರ್ಯದರ್ಶಿ ಸಂತೋಷ್ ಪಾಟಣಕರ್ ಶಿಕ್ಷಕ ಡಾ. ನವೀನ್ ಕುಮಾರ , ನಿವೃತ್ತ ತಹಶೀಲ್ದಾರ್ ತುಳಸಿ ಪಾಲೇಕರ್ ಹಾಗೂ ವರಮಹಾಲಕ್ಷ್ಮಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಪುಷ್ಪಾಂಜಲಿ ಸ್ವಾಗತಿಸಿದರು. ಸ್ಮಿತಾ ಮೊರಸ್ಕರ್ ಕಾರ್ಯಕ್ರಮ ನಿರ್ವಹಿಸಿದರು ಮತ್ತು ವಂದಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *