Breaking News

ಜನರ ಆರೋಗ್ಯದ ಹಿತದೃಷ್ಟಿಯಿಂದ ಹೊರಡಿಸಿದ ಗುಟ್ಕಾ–ಪಾನ್ ಮಸಾಲಾ ನಿಷೇಧ ವಾಪಸ್ ಇಲ್ಲ – ಯು‌.ಟಿ.ಖಾದರ್ ಆರೋಗ್ಯ ಸಚಿವ.

ಪ್ರತಿಧ್ವನಿ ಯಲ್ಲಾಪುರ : ರಾಜ್ಯದಲ್ಲಿ ತಂಬಾಕು ಅಥವಾ ನಿಕೋಟಿನ್‌ ಹೊಂದಿರುವ ಗುಟ್ಕಾ ಹಾಗೂ ಪಾನ್‌ ಮಸಾಲಾ ಉತ್ಪನ್ನಗಳ ಮೇಲೆ ವಿಧಿಸಿರುವ ಒಂದು ವರ್ಷದ ಕಟ್ಟುನಿಟ್ಟಿನ ನಿಷೇಧದ ಆದೇಶವನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆರೋಗ್ಯದ ದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್‌ ಮಸಾಲಾ ಉತ್ಪನ್ನಗಳ ಮೇಲೆ ನಿಷೇಧ ಹೇರಲಾಗಿದೆ. ಈ ನಿರ್ಧಾರದಿಂದ ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದರು.

ನಿಷೇಧದ ಆದೇಶವನ್ನು ಸರ್ಕಾರ ಹಿಂದಕ್ಕೆ ಪಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ ಅವರು, “ನಾನು ಹೊರಡಿಸಿದ ಆದೇಶವನ್ನು ವಾಪಸ್ ಪಡೆದಿಲ್ಲ” ಎಂದು ತಿಳಿಸಿದರು.

ಅಡಿಕೆ ಬೆಳೆಗಾರರು ಹಾಗೂ ರೈತರ ಹಿತಾಸಕ್ತಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ಅಡಿಕೆಗೆ ಯಾವುದೇ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುವುದು. ಗುಟ್ಕಾ ತಯಾರಿಕೆಗೆ ದೇಶೀಯ ಅಡಿಕೆಯನ್ನು ಬಳಸುವುದಿಲ್ಲವಾದರೆ ನೇಪಾಳ, ಬಾಂಗ್ಲಾದೇಶ ಸೇರಿದಂತೆ ಇತರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುವ ಸಾಧ್ಯತೆಯಿದೆ. ಇದರಿಂದ ಅಡಿಕೆಯ ಬೆಲೆ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಆರೋಗ್ಯದ ದೃಷ್ಟಿಯಿಂದ ಗುಟ್ಕಾ ಮತ್ತು ನಿಕೋಟಿನ್‌ಯುಕ್ತ ಪಾನ್‌ ಮಸಾಲಾ ಮೇಲಿನ ನಿಷೇಧ ಉತ್ತಮ ನಿರ್ಧಾರವಾಗಿದ್ದು, ಈ ವಿಚಾರದಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಸ್ಪಷ್ಟನೆ ನೀಡಲಾಗಿದೆ ಎಂದು ಯು.ಟಿ. ಖಾದರ್ ತಿಳಿಸಿದರು.

ಅಡಿಕೆ ಬೆಳೆಗಾರರಿಗೆ ಹಾಗೂ ವ್ಯಾಪಾರಿಗಳಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *