Breaking News

ಯಲ್ಲಾಪುರ ವಿನಾಯಕ ನಗರ ಗಣಪತಿ  9 ನೆ ವರ್ಷದ ಆಚರಣೆ – ಸೆ,17 ಕ್ಕೆ ಅನ್ನಸಂತರ್ಪಣೆ – ಶ್ಯಾಮಸುಂದರ ಭಾಸ್ಕರ ಆಚಾರಿ.


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ವಿನಾಯಕನಗರ ಸಾರ್ವಜನಿಕ ಗಜಾನನೋತ್ಸವ ಸಮಿತಿ ಅಡಿಯಲ್ಲಿ ಒಂಬತ್ತನೆ ವರ್ಷದ ಚೌತಿ ಗಣಪನ ಸಂಭ್ರಮಾಚರಣೆ ವಿಜ್ರಂಭಣೆಯಿಂದ ಜರುಗುತ್ತಿದ್ದು ಐದು ದಿನಗಳ ಕಾಲವಪೂಜಿಸಲ್ಪಡುವ ಗಣಪನ ಸಾನಿಧ್ಯದಲ್ಲಿ ಸೆ,17 ರ ಗುರುವಾರದಂದು ಗಣಹವನ ಸಾರ್ವಜನಿಕ ಅನ್ನಸಂತರ್ಪಣೆ ಜರುಗಲಿದೆ ಎಂದು ಸಮಿತಿ ಅಧ್ಯಕ್ಷ ಶ್ಯಾಮಸುಂದರ ಭಾಸ್ಕರ ಆಚಾರಿ ಪ್ರತಿಧ್ವನಿ ಗೆ ತಿಳಿಸಿದ್ದಾರೆ.


ದಿನಾಂಕ 14 ರಂದು ಪ್ರತಿಷ್ಟಾಪಿಸಲ್ಪಟ್ಟ ಗಣಪತಿಯು ಸತತ ಐದು ದಿನಗಳ ಕಾಲ ಶ್ರದ್ದಾ ಭಕ್ತಿಯಿಂದ ಪೂಜೆ ಪುನಸ್ಕಾರಗಳು ಜರುಗಲಿದ್ದು. 17 ಕ್ಕೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆದು 18 ರಂದು ವಿಶೇಷ ಪೂಜೆ,ಫಲಾವಳಿ ಸವಾಲು ಜರುಗಿ ವಿಸರ್ಜನೆ ನಡೆಯಲಿದೆ.


ಈ ಎಲ್ಲಾ ಶ್ರದ್ದಾ ಭಕ್ತಿ ಕಾರ್ಯಕ್ರಮಗಳಲ್ಲಿ ಸಮಸ್ತ ಸಾರ್ವಜನಿಕರು ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿ ತನು,ಮನ,ಧನ ಸಹಾಯದೊಂದಿಗೆ ಗಜಮುಖನ ಕೃಪೆಗೆ ಪಾತ್ರರಾಗಬೇಕೆಂದು ಸಮಿತಿ ಅಧ್ಯಕ್ಷ ಶ್ಯಾಮಸುಂದರ ಭಾಸ್ಕರ ಆಚಾರಿ ಕೋರಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *