Breaking News

ನಂದೊಳ್ಳಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಶಾಸಕ ಹೆಬ್ಬಾರ್ ಭೇಟಿ – ಅಭಿವೃದ್ಧಿ ವೇಗಕ್ಕೆ ಸಂತಸ.

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕ್ರಿಯಾಶೀಲ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ನಂದೊಳ್ಳಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ  ಶಿವರಾಮ‌ ಹೆಬ್ಬಾರ ಮಂಗಳವಾರ ಬೇಟಿ ನೀಡಿದರು.

ಸೊಸೈಟಿ ಯ ಅಭಿವೃದ್ಧಿ ವೇಗಕ್ಕೆ  ಸಂತಸವಾಗಿ ಉತ್ತಮ ಆರ್ಥಿಕ ವ್ಯವಹಾರ, ಸಾರ್ವಜನಿಕ ವಲಯದಲ್ಲಿ ಸೊಸೈಟಿಯ ಸೇವಾ ಪ್ರಕ್ರಿಯೆ ಮತ್ತು ಗ್ರಾಹಕ ಸ್ನೇಹಿ ಸಂಸ್ಥೆಯಾಗಿ ಮತ್ತಷ್ಟು ಪ್ರಗತಿ ಸಾಧಿಸಲೆಂದು ಶುಭ ಹಾರೈಸಿದರು.

ಈ ಸಂದರ್ಭಲ್ಲಿ ಪಿ.ಎಲ್.ಡಿ ಬ್ಯಾಂಕ ಅಧ್ಯಕ್ಷರ ಆರ್.ಎಸ್ ಭಟ್ಟ. ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕರ ವಿ.ಎಸ್.ಭಟ್ಟ. ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಗಣೇಶ ಹೆಗಡೆ ಸವಣಗೆರೆ, ಪಟ್ಟಣ ಪಂಚಾಯತ ಮಾಜಿ ಉಪಾಧ್ಯಕ್ಷ ಅಮಿತ ಅಂಗಡಿ,ಸೊಸೈಟಿಯ ಅಧ್ಯಕ್ಷರು, ಉಪಾಧ್ಯಕ್ಷರು , ನಿರ್ದೇಶಕರು ಮತ್ತು ಹೆಬ್ಬಾರ ಅಭಿಮಾನಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *