Breaking News

ಸುಸೂತ್ರವಾಗಿ ಮುಕ್ತಾಯ ಕಂಡ ಎಸ್.ಎಸ್.ಎಲ್.ಸಿ ಪರೀಕ್ಷೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ವಿದ್ಯಾರ್ಥಿ ದೆಸೆಯಲ್ಲಿ ಅತ್ಯಂತ ಪ್ರಮುಖ ಘಟ್ಟವಾದ ಎಸ್.ಎಸ್.ಎಲ್.ಸಿ ಪರೀಕ್ಷೆ ಏ.15 ರಂದು ಮುಕ್ತಾಯಗೊಂಡಿದೆ.

ತಾಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳಿದ್ದು ಮಾ.31 ರಿಂದ ಪ್ರಾರಂಭವಾದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಯಾವುದೇ ಸಮಸ್ಯೆಗಳಿಲ್ಲದಂತೆ ಏ.15 ರಂದು ಮುಕ್ತಾಯ ಕಂಡಿದೆ.

ಕೊನೆಯ ದಿನ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಯಿದ್ದು ಎಲ್ಲಾ ಕೇಂದ್ರಗಳಲ್ಲೂ ಸಂಪೂರ್ಣ ಹಾಜರಾತಿ ಇದ್ದು ಯಶಸ್ವಿ ಮುಕ್ತಾಯ ಕಂಡಿದೆ.

ಈ ಸುದ್ದಿಯ ದೃಶ್ಯಾವಳಿ ವೀಕ್ಷಿಸಲು ಇದನ್ನು ಕ್ಲಿಕ್ ಮಾಡಿ ಪ್ರೋತ್ಸಾಹಿಸಲು ಸಬ್ ಸ್ಕ್ರೈಬ್ ಮಾಡಿ

ಯಲ್ಲಾಪುರ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ತಾಲ್ಲೂಕಿನ ವಿದ್ಯಾಕಾಶಿ ಎಂದೇ ಪ್ರಖ್ಯಾತಿ ಪಡೆದ ವೈಟಿಎಸ್ಎಸ್ ವಿದ್ಯಾಸಂಸ್ಥೆ ಯಲ್ಲಿ ಪರೀಕ್ಷೆ ಬರೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಸಂತಸ ಸಂಭ್ರಮದಿ ಮನೆಯ ಕಡೆಗೆ ಹೆಜ್ಜೆ ಹಾಕಿದರು. ಜೊತೆಗೆ ಮಕ್ಕಳನ್ನು ಕರೆದುಕೊಂಡು ಹೋಗಲು ಪೋಷಕರು ಸಹ ಕಾಯುತ್ತಿರುವುದು ಸಾಮನ್ಯವಾಗಿತ್ತು

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *