Breaking News

ಸ್ವಾಸ್ಥ್ಯ ಸಮಾಜಕ್ಕಾಗಿ ಶ್ರಮಿಸುವ ಪೌರಕಾರ್ಮಿಕರಿಗೆ ಸಂಕಷ್ಟ ಭತ್ಯೆ ಸಿಗುವುದು ಎಂದು?

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ2022-23ನೇ ಸಾಲಿನ ಆಯವ್ಯಯ ಮಂಡಿಸುವ ಮುಖ್ಯಮಂತ್ರಿಗಳ ಭಾಷಣದಲ್ಲಿ ಪೌರಕಾರ್ಮಿಕರಿಗೆ ಮೊಟ್ಟ ಮೊದಲ ಬಾರಿಗೆ ತಿಂಗಳಿಗೆ 2000 ರು ಸಂಕಷ್ಟ ಭತ್ಯೆ ನೀಡುವ ಕುರಿತು ಘೋಷಿಸಿದ್ದರು ಆದರೆ ಯಲ್ಲಾಪುರದ ಪಟ್ಟಣ ಪಂಚಾಯತ ಪೌರಕಾರ್ಮಿಕರಿಗೆ ಈ ಭಾಗ್ಯ ಇನ್ನೂ ನೀಡದಿರುವುದು ವಿಪರ್ಯಾಸವಾಗಿದೆ.


ಸಮಾಜದ ಆರೋಗ್ಯಕ್ಕಾಗಿ ನಿತ್ಯ ಅಪಾಯಕಾರಿ ಮತ್ತು ಆರೋಗ್ಯಕ್ಕೆ ಮಾರಕವಾದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರ ಸೇವೆ ಅತ್ಯಂತ ಶ್ಲಾಘನೀಯವಾದುದು.

ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವುದನ್ನು ಗಮನದಲ್ಲಿಟ್ಟುಕೊಂಡು ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಆಯವ್ಯಯ ಸಂದರ್ಭದ ಭಾಷಣದಲ್ಲಿ ಮೊಟ್ಟ ಮೊದಲ ಬಾರಿಗೆ ಪೌರಕಾರ್ಮಿಕರಿಗೆ ಸಂಕಷ್ಟ ಭತ್ಯೆ ಘೋಷಿಸಿದ್ದರು. ಈ ಯೋಜನೆಗೆ ಆರ್ಥಿಕ ಇಲಾಖೆಯೂ ಒಪ್ಪಿಗೆ ನೀಡಿತ್ತು.

ಹಾಗೂ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಹೊರತುಪಡಿಸಿ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ  ಪೌರಕಾರ್ಮಿಕರ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿತ್ತು.ಆದರೆ ಇದುವರೆಗೆ ಸಂಕಷ್ಟ ಭತ್ಯೆ ಪೌರಕಾರ್ಮಿಕರ ಕೈ ಸೇರದಿರುವುದು ಗೊಂದಲಕ್ಕೆ ಕಾರಣವಾಗಿದೆ.

ಈಗಾಗಲೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಈ ಯೋಜನೆ ಅನುಷ್ಠಾನಗೊಂಡು ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು 2000  ಸಂಕಷ್ಟ ಭತ್ಯೆ ನೀಡಲಾಗುತ್ತಿರುವ ಮಾಹಿತಿ ಲಭಿಸಿದೆ.
ಘೋಷಣೆಯಾದ ಮತ್ತು ಆರ್ಥಿಕ ಇಲಾಖೆ ಅನುಮತಿಸಿದ ಸಂಕಷ್ಟಕ್ಕೆ ಅನುಕೂಲವಾಗುವ ಹಣವನ್ನು ಪೌರಕಾರ್ಮಿಕರಿಗೆ ನೀಡುವಂತಾಗಬೇಕಿದೆ.

ಯಲ್ಲಾಪುರ ಪಟ್ಟಣ ಪಂಚಾಯತದಲ್ಲಿ 12 ಮಂದಿ ಖಾಯಂ ಹಾಗು ಹೊರಗುತ್ತಿಗೆ ಆಧಾರದಲ್ಲಿ 5 ಮಂದಿ ಸೇರಿದಂತೆ  ಒಟ್ಟು 17 ಮಂದಿ ಪೌರ ಕಾರ್ಮಿಕರಿಗೆ ಈ ಭಾಗ್ಯ ಸಲ್ಲಬೇಕಿದೆ ಸರ್ಕಾರದ ಆದೇಶವಾಗಿ‌ ವರ್ಷ  ಕಳೆದರೂ ಪೌರಕಾರ್ಮಿಕರಿಗೆ ಸಂಕಷ್ಟ ಭತ್ಯೆ ದಕ್ಕದಿರುವುದು ದುರದೃಷ್ಟವಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಪೌರಕಾರ್ಮಿಕರಿಗೆ ಸಲ್ಲಬೇಕಾದ ಸಂಕಷ್ಟ ಭತ್ಯೆ ದೊರಕಿಸಿಕೊಡಬೇಕಿದೆ.

ಸರ್ಕಾರದಿಂದ ಘೋಷಣೆಯಾದ ನಂತರ ಸಂಕಷ್ಟ ಭತ್ಯೆ ನೀಡಬೇಕಿತ್ತು ಆದರೆ ನಮಗೆ ಬರಲಿಲ್ಲ ಕೆಲವು ಕಡೆಗಳಲ್ಲಿ ಈ ಹಣ ನೀಡುತ್ತಿದ್ದು ನಮಗು ದೊರೆಯಬೇಕಿದೆ. ಇದರಿಂದ ನಮ್ಮ ಜೀವನ ನಿರ್ವಹಣೆಗೆ ಅನುಕೂಲವಾಗಲಿದೆ.
ಹೆಸರು ಹೇಳಲಿಚ್ಚಿಸಿಸದ ಪ.ಪಂ ಪೌರಕಾರ್ಮಿಕ.

ಈ ವಿಚಾರ ನನ್ನ ಗಮನಕ್ಕೆ ಬಂದಿದ್ದು ಪೌರಕಾರ್ಮಿಕರಿಗೆ ಸಂಕಷ್ಟ ಭತ್ಯೆ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಸಂಬಂಧಿಸಿದ ಮಾಹಿತಿ  ಸಂಬಂಧಿಸಿದ ಇಲಾಖೆಗೆ ಶೀಘ್ರವಾಗಿ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಸಂಗನ ಬಸಯ್ಯ , ಮುಖ್ಯಾಧಿಕಾರಿ , ಯಲ್ಲಾಪುರ ಪಟ್ಟಣ ಪಂಚಾಯತ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *