Breaking News

ತ್ಯಾಗ,ನಿಷ್ಠೆ, ಮೂಲಕ ಮನುಷ್ಯ ಜಗತ್ತಿಗೆ ಮಾದರಿಯಾಗಲು ಸ್ಕೌಟ್ಸ್ ಮತ್ತು ಗೈಡ್ಸ್ ಸಹಹಾರಿ – ಎನ್.ಆರ್.ಹೆಗಡೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ.


ಪ್ರತಿಧ್ವನಿ,ಯಲ್ಲಾಪುರ : ಶಿಕ್ಷಕ ವಿದ್ಯಾರ್ಥಿಗಳಾದವರು ಸದಾ ಅಧ್ಯಯನಾಸಕ್ತರಾಗಿರಬೇಕು. ಬೇರೆಬೇರೆ ಸಾಮಾಜಿಕ ಹಿನ್ನೆಲೆಯಿಂದ ಬರುವ ವಿದ್ಯಾರ್ಥಿಗಳಲ್ಲಿ ಮಾನಸಿಕ ಶಿಸ್ತನ್ನು ರೂಪಿಸುವುದು, ಕ್ರಿಯಾಶಕ್ತಿ ಜಾಗೃತಗೊಳಿಸುವುದು ನಮ್ಮ ಜವಾಬ್ದಾರಿ ಎಂದು ತಿಳಿಯಬೇಕು. ಅದಕ್ಕೆ ಸ್ಕೌಟ್ಸ್ ಗೈಡ್ಸ್ ತರಬೇತಿಯಿಂದ ಮಕ್ಕಳ ವ್ಯಕ್ತಿತ್ವ ಬೆಳೆಸಲು ಸಹಾಯಕ ವಾಗುತ್ತದೆ ಎಂದು ಯಲ್ಲಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎನ್.ಆರ್.ಹೆಗಡೆ ಹೇಳಿದರು.
ಅವರು ಜಿಲ್ಲಾ ಸ್ಕೌಟ್ಸ್ ಗೈಡ್ಸ್ ಸಂಸ್ಥೆ ಮತ್ತು ವಿಶ್ವದರ್ಶನ ಬಿ.ಇಡಿ ಕಾಲೇಜಿನ ಸಹಯೋಗದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಪ್ರಾರಂಭಿಕ ಮಾಹಿತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿ ಚಾಲನೆ ನೀಡಿ ಮಾತನಾಡುತ್ತಿದ್ದರು.
`ಸದಾ ಜಾಗೃತಾವಸ್ಥೆಯಲ್ಲಿರು’ ಎಂಬ ಧ್ಯೇಯ ವಾಕ್ಯದ ಭಾರತ ಸ್ಕೌಟ್ಸ್ ಗೈಡ್ಸ್ ಸಮಾಜದ ವ್ಯಕ್ತಿಯು ತನ್ನ ಮೇಲಿರುವ ಅನೇಕ ಋಣಗಳನ್ನು ತೀರಿಸಲು, ಅವಶ್ಯಕತೆ ಇರುವಲ್ಲಿ ಸಹಾಯ ನೀಡಲು, ತ್ಯಾಗ, ನಿಷ್ಠೆಯ ಮೂಲಕ ಜಗತ್ತಿಗೆ ಮಾದರಿಯಾಗಲು ಸಹಾಯ ಮಾಡುತ್ತದೆ. ಆದ್ದರಿಂದ ತಾವು ವೃತ್ತಿ ಪ್ರಾರಂಭಿಸುವಾಗ ಇಂತಹ ತರಬೇತಿಗಳನ್ನು ಪಡೆದು ಮಕ್ಕಳನ್ನು ತರಬೇತು ಗೊಳಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪಿ.ಯು ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಕೆ.ಗಾಂವ್ಕರ್ ಸಾಂದರ್ಭಿಕ ಮಾತನಾಡಿದರು.
ತಾಲೂಕಾ ಸ್ಕೌಟ್ಸ್ ಗೈಡ್ಸ್ ಅಧ್ಯಕ್ಷ ನಂದನ ಬಾಳಗಿ, ಮುಖ್ಯಾಧ್ಯಾಪಕಿ ಮುಕ್ತಾ ಶಂಕರ, ಕಾರ್ಯದರ್ಶಿ ಸುಧಾಕರ ನಾಯಕ, ಜಿಲ್ಲಾ ಸಂಚಾಲಕ ವೀರೇಶ ಮಾದರ, ಮಹೇಶ ನಾಯ್ಕ, ಖೈರೂನ್ ಶೇಖ್, ಕಲಾವತಿ ಗೌಡ, ಗುರು ಬಂಟ, ಉಪಸ್ಥಿತರಿದ್ದರು. ಕನ್ನಡ ಮಾಧ್ಯಮ ಗೈಡ್ಸ್ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಪ್ರಶಿಕ್ಷಣಾರ್ಥಿ ಪ್ರತಿಮಾ ನಿರ್ವಹಿಸಿದಳು. ನವೀನಕುಮಾರ ಎ.ಜಿ ಸ್ವಾಗತಿಸಿದರು. ಚಂದ್ರಶೇಖರ ಸಿ.ಎಸ್ ವಂದಿಸಿದರು.
ಈ ಸಂದರ್ಭದಲ್ಲಿ ಭಾರತ ಸ್ಕೌಟ್ಸ್ ಗೈಡ್ಸ್ ವಾರ್ಷಿಕ ಕಾರ್ಯ ಯೋಜನೆಯನ್ನು ಗಣ್ಯರು ಬಿಡುಗಡೆ ಗೊಳೀಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

2025 ನೆ ಸಾಲಿನ ಯಲ್ಲಾಪುರ ಗಣಪತಿಗಳ ದಿವ್ಯ ದರ್ಶನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದಲ್ಲಿ 20 ಕ್ಕು ಅಧಿಕ ಕಡೆಗಳಲ್ಲಿ …

Leave a Reply

Your email address will not be published. Required fields are marked *