Breaking News

ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ ಇಬ್ಬರು ಯುವಕರು ಸ್ಥಳದಲ್ಲೇ ಸಾವು ಒಬ್ಬನ ಸ್ಥಿತಿ ಗಂಭೀರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ: ಪಟ್ಟಣದ ತಟಗಾರ ಕ್ರಾಸ್ ಬಳಿ ರವಿವಾರ ಸಂಜೆ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು ಮತ್ತೊಬ್ಬ ತೀವ್ರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕಳುಹಿಸಲಾಗಿದೆ.


ಚಂದಗುಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಮನಕೊಪ್ಪ ನಿವಾಸಿ , ಹಳಿಯಾಳದಲ್ಲಿ ಐಟಿಐ ಓದುತ್ತಿರುವ ದರ್ಶನ ಶ್ರೀಕಾಂತ ಭಂಡಾರಿ (18) ಹಾಗೂ ಮದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಣಶೆಟ್ಟಿಕೊಪ್ಪದ ನಿವಾಸಿ ಟೈಲ್ಸ ಕಾರ್ಮಿಕ ರಾಜು ಸುರೇಶ ಆಚಾರಿ (18) ಮೃತಪಟ್ಟ ಯುವಕರಾಗಿದ್ದಾರೆ.
ಯಲ್ಲಾಪುರ ಪಟ್ಟಣ ನಿವಾಸಿ ಬಾರ್ ಬೆಂಡರ್ ಜಾಬೀರ್ ಮಹಮ್ಮದ್ ಗೌಸ್ ಬಾಳಸೊಂಗಿ ( 18) ಗಾಯಾಳು ಯುವಕನಾಗಿದ್ದಾನೆ.

ಅಪಘಾತದ ಭಯಾನಕ ದೃಶ್ಯಾವಳಿ ವೀಕ್ಷಿಸಿ


ಘಟನೆ ವಿವರ : ಕಾರು ಹಾಗೂ ಬೈಕ್ ಎರಡೂ ಕಾರವಾರದಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಕಾರನ್ನು ಒಮ್ಮೆಲೆ ತಿರುಗುಸಿದಾಗ ಬೈಕ್ ಡಿಕ್ಕಿಯಾಗಿದ್ದು ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರು. ಒಬ್ಬಾತನಿಗೆ ಗಂಭೀರ ಗಾಯಗಳಾಗಿವೆ.
ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಿಸಿಲಿನ ಝಳಕ್ಕೆ ತಂಪೆರೆವ ಸ್ವರ್ಗ  ಯಲ್ಲಾಪುರದ “ಸಾತೊಡ್ಡಿ ಜಲಪಾತ” ಪ್ರವಾಸಿಗರ ಕೈ ಬೀಸಿ ಕರೆಯುತ್ತಿದೆ.

ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ಒಂದೆಡೆ ಸಾಗರ ಮತ್ತೊಂದೆಡೆ ಜಲಪಾತಗಳ ಆಗರ  ಹಚ್ಚಹಸಿರಿನ ಮಡಿಲು ಉತ್ತರ ಕನ್ನಡ …

Leave a Reply

Your email address will not be published. Required fields are marked *