Breaking News

ಶ್ರೀ ಗ್ರಾಮದೇವಿ ದ್ವಿಚಕ್ರ ವಾಹನಗಳ ತಂತ್ರಜ್ಞರ ಬಳಗದ ಕಾರ್ಯಕ್ರಮದಲ್ಲಿ ಶಾಸಕ ಶಿವರಾಮ ಹೆಬ್ಬಾರ್

ಪ್ರತಿಧ್ವನಿ ಯಲ್ಲಾಪುರ :  ಶಾಸಕ ಶಿವರಾಮ ಹೆಬ್ಬಾರ್  ಶನಿವಾರ ಯಲ್ಲಾಪುರ ಪಟ್ಟಣದಲ್ಲಿ ಶ್ರೀ ಗ್ರಾಮದೇವಿ ದ್ವಿಚಕ್ರ ವಾಹನಗಳ ತಂತ್ರಜ್ಞರ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಶಾಸಕರು, ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ವತಿಯಿಂದ ನೀಡಲಾಗುವ ವಿವಿಧ ಪರಿಕರಗಳನ್ನು ವಿತರಿಸಿದರು.

ಇದೇ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳ ದುರಸ್ತಿ ದರಪಟ್ಟಿಯನ್ನು ಬಿಡುಗಡೆಗೊಳಿಸಿ, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ದ್ವಿಚಕ್ರ ವಾಹನಗಳ ದುರಸ್ತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ತಂತ್ರಜ್ಞರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವರ ಕಲ್ಯಾಣಕ್ಕಾಗಿ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಶಾಸಕರು ಮಾತನಾಡಿದರು. ಕಾರ್ಮಿಕರು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಂಡು ತಮ್ಮ ವೃತ್ತಿ ಹಾಗೂ ಜೀವನಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರು ಕಾರ್ಮಿಕ ಇಲಾಖೆಯಿಂದ ನೀಡುವ ಉಚಿತ ಕಿಟ್ ಪಡೆದ ಫಲಾನುಭವಿಗಳು ಇತರರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *