
ಪ್ರತಿಧ್ವನಿ ಯಲ್ಲಾಪುರ : ತಾಲೂಕು ಮಟ್ಟದಲ್ಲಿ ನಡೆದ ಚೆಸ್ ಪಂದ್ಯದಲ್ಲಿ ಸವಣಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ವೈಷ್ಣವಿ ವಿಶ್ವನಾಥ ಭಟ್ಟ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ವೈಷ್ಣವಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದು ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕ ವೃಂದ, ಎಸ್. ಡಿ. ಎಮ್. ಸಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಗ್ರಾಮಸ್ಥರು ಶಾಲಾ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.











Prathidvani Yellapura