Breaking News

ಯಲ್ಲಾಪುರದಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಪ್ರತಿಭಟನೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಟಿಎಂ ರಾಜ್ಯವನ್ನಾಗಿ ಬಳಸಿಕೊಂಡಿದೆ. ಪಂಚರಾಜ್ಯಗಳ ಚುನಾವಣೆಯ ಸಮಯದಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಮನೆಗಳಲ್ಲಿ ಕೋಟಿ ಕೋಟಿ ಹಣ ಐಟಿ ಧಾಳಿಯ ವೇಳೆ ಕಂಡು ಬಂದಿರುವುದು ಯಾವ ಪ್ರಮಾಣದಲ್ಲಿ ಸರ್ಕಾರ ಲೂಟಿಗಿಳಿದಿದೆ ಎಂಬುದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಂಡಿದ್ದಾರೆ. ಉಚಿತ ಭಾಗ್ಯಗಳ ಹೆಸರಿನಲ್ಲಿ ಜನರಿಗೆ ಮಂಕುಬೂದಿ ಎರಚಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಿದೆ ಎಂದು ಉತ್ತರಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ ನಾಯಕ ಆಗ್ರಹಿಸಿದರು.


ಅವರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ವತಿಯಿಂದ ಕಾಂಗ್ರೆಸ್ ವಿರುದ್ದ ನಡೆದ ಭ್ರಷ್ಟಾಚಾರದ ಪ್ರತಿಭಟನೆಯಲ್ಲಿ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದರು.


ಸಂಖ್ಯೆ ವಿಚಾರಕ್ಕೆ ಬಂದರೆ ಬಿಜೆಪಿ ಮತಗಳು ಪ್ರತಿಬಾರಿಗಿಂತ ಈ ಬಾರಿ ಹೆಚ್ಚಾಗಿಯೇ ಲಭಿಸಿದ್ದು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಮುಂದಿದೆಯೇ ಹೊರತು ಪ್ರಜಾಮತಗಳ ಅಭಿಪ್ರಾಯದಂತೆ ಬಿಜೆಪಿ ತನ್ನ ಗೌರವ ಸ್ಥಾನಮಾನವನ್ನಿ ಉಳಿಸಿಕೊಂಡಿದೆ. ಬರುವ ದಿನಗಳಲ್ಲಿ ಸುಳ್ಳು ಆಶ್ವಾಸನೆಗಳ ಮುಖವಾಡ ಕಳಚಿ ಬಿದ್ದು ಕಾಂಗ್ರೆಸ್ ಧೂಳಿಪಟವಾಗಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ರಾ.ವಿ.ಯೋ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಹೇಳಿದರು.


ಪ್ರತಿಭಟನಾ ನಿರತ ಬಿಜೆಪಿಗರು ನುಡಿದಂತೆ ಉಚಿತ ಭಾಗ್ಯಗಳನ್ನು ಜನಸಾಮಾನ್ಯರಿಗೆ ಸಮರ್ಪಕವಾಗಿ ನೀಡದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಕೋಟಿ ಕೋಟಿ ಹಣದೊಂದಿಗೆ ಸಿಕ್ಕಿ ಬೀಳುತ್ತಿರುವ ನೀತಿಗೆಟ್ಟ ಸರ್ಕಾರದ ವಿರುದ್ಧ ಬಿತ್ತಿಪತ್ರ ಹಿಡಿದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್, ಪ್ರಧಾನ ಕಾರ್ಯದರ್ಶಿ ಪ್ರಸಾದ ಹೆಗಡೆ, ಜಿಲ್ಲಾ ಉಪಾಧ್ಯಕ್ಷ ಉಮೇಶ್ ಭಾಗ್ವತ, ಜಿಲ್ಲಾ ಪ್ರಮುಖರಾದ ಗುರುಪ್ರಸಾದ, ಎನ್.ಎಸ್.ಹೆಗಡೆ ಸ್ಥಳೀಯ ಪ್ರಮುಖರಾದ ಜಿ.ಪಂ ಸದಸ್ಯೆ ಶೃತಿ ಹೆಗಡೆ, ತಾ.ಪಂ ಮಾಜಿ ಅಧ್ಯಕ್ಷೆ ಚಂದ್ರಕಲಾ ಭಟ್ಟ, ಪ.ಪಂ ಸದಸ್ಯ ಸೋಮೇಶ್ವರ ನಾಯ್ಕ, ಗಣಪತಿ ಮಾನಿಗದ್ದೆ, ಸುಬ್ಬಣ್ಣ ಬೋಳ್ಮನೆ, ಬಾಬಾ ಅಲನ್‌ಸಾಬ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿರಲಿಲ್ಲ. ಆದರೆ ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂಬ ಸಂದೇಶ ವಾಟ್ಸಪ್ ಗ್ರೂಪ್‌ಗಳಲ್ಲಿ ಹರಿದಾಡಿತ್ತು. ಪಟ್ಟಣ ಪಂಚಾಯತ ಮಾಜಿ ಅಧ್ಯಕ್ಷ ಶಿರೀಶ್ ಪ್ರಭು ಹೊರತುಪಡಿಸಿ ಹೆಬ್ಬಾರ್ ಅಭಿಮಾನಿಗಳು, ಆಪ್ತರು ಅವರೊಂದಿಗೆ ಗುರುತಿಸಿಕೊಂಡವರೂ ಸಹ ಪ್ರತಿಭಟನೆಯಲ್ಲಿ ಭಾಗವಹಿಸಿರಲಿಲ್ಲ. ವಿಶೇಷವೆಂದರೆ ಪ್ರತಿಭಟನಾ ನಿರತರಲ್ಲಿ ಶೇಕಡಾ 99 ಭಾಗ ಮೂಲ ಬಿಜೆಪಿಗರೇ ಇದ್ದರು. ಪಂಚರಾಜ್ಯ ಚುನಾವಣೆ ಘೋಷಣೆಯಾಗಿದ್ದು ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿರುವಾಗ ಬಿಜೆಪಿಯೊಳಗೆ ಏನೇನೋ ಬದಲಾವಣೆಗಳು ಕಂಡುಬರುತ್ತಿದೆ ಎಂಬುದು ಜನಸಾಮಾನ್ಯರ ಗುಸುಗುಸು ಆಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *