Breaking News

ಅಕ್ರಮವಾಗಿರಿಸಿಕೊಂಡ ನಾಡ ಬಂದೂಕು ವಶಕ್ಕೆ ಅರೋಪಿ ಪರಾರಿ


ಪ್ರತಿದ್ವನಿ ಯಲ್ಲಾಪುರ : ತಾಲೂಕಿನ ನಂದೊಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ತೆಂಗಿನಜಡ್ಡಿಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಇರಿಸಿಕೊಂಡಿದ್ದ ನಾಡ ಬಂದೂಕನ್ನು ಯಲ್ಲಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ತೆಂಗಿನ ಜಡ್ಡಿಯ ಮಂಜುನಾಥ ಕೇಶವ ಸಿದ್ದಿ ಎಂಬಾತ ಅಧಿಕೃತ ಪರವಾನಗಿ ಇಲ್ಲದೇ ನಾಡಬಂದೂಕನ್ನು ಇಟ್ಟುಕೊಂಡಿದ್ದು ಯಲ್ಲಾಪುರ ಪೊಲೀಸರು ಧಾಳಿ ನಡೆಸಿದಾಗ ಆರೋಪಿ ಪರಾರಿಯಾಗಿದ್ದಾನೆ. ಆತನ ಮನೆಯ ಕೊಟ್ಟಿಗೆಯಲ್ಲಿ ಶೋಧಿಸಿದಾಗ ನಾಡ ಬಂದೂಕು ಪತ್ತೆಯಾಗಿದ್ದು ಪರಾರಿಯಾದ ಆಪಾದಿತ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *