




ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಸದೃಡ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿಯುವಲ್ಲಿ ಬೆಂಬಲವಾಗಿ ಈ ಬಾರಿಯ ಮತದಾರ ಮತ ಚಲಾಯಿಸಿದ್ದಾನೆ. ಕ್ಷೇತ್ರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಭ್ಯರ್ಥಿಯಾದರೂ ಚುನಾವಣೆ ನಡೆದದ್ದು ಮಾತ್ರ ಕಾಂಗ್ರೆಸ್ ಮತ್ತು ಮೋದಿಯ ನಡುವೆ. ಈ ಮತ ಸಮರದಲ್ಲಿ ೨.೫೦ಲಕ್ಷ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಬಾರೀ ಗೆಲುವನ್ನು ದಾಖಲಿಸಲಿದ್ದಾರೆ ಎಂದು ಉತ್ತರಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್ ಹೆಗಡೆ ಹೇಳಿದರು.
ಅವರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದಿಗೋಷ್ಠಿ ನಡೆಸಿ ಪಕ್ಷದಿಂದ ಬೂತ್ ಪ್ರಮುಖರಿಂದ ಪಡೆದ ಅಭಿಪ್ರಾಯವನ್ನು ಆಧರಿಸಿ ಆತ್ಮಾವಲೋಕನದೊಂದಿಗೆ ಸಂಗ್ರಹಿಸಿದ ಮಾಹಿತಿಯನ್ನು ಮಾಧ್ಯಮಕ್ಕೆ ನೀಡಿದರು.

ಕೇಂದ್ರ ಸರ್ಕಾರವು ರಾಜ್ಯ ರೈತರ ನೆರವಿಗೆ ಬಂದಿದ್ದು ದೊಡ್ಡ ಪ್ರಮಾಣದಲ್ಲಿ ಬೆಳೆ ವಿಮೆಯನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಿದೆ. ಅದರಲ್ಲೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರೈತರಿಗೆ ಹೆಚ್ಚಿನ ಪ್ರಮಾಣದ ವಿಮೆ ಪಾವತಿಯಾಗಿದೆ. ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೂ , ಕೇಂದ್ರ ಕೃಷಿ ಸಚಿವರಿಗೂ ಉತ್ತರಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಧನ್ಯವಾದಗಳನ್ನು ತಿಳಿಸುತ್ತೇವೆ. ಮುಂದೆ ಪ್ರತಿ ಬೂತ್ ಮಟ್ಟದಲ್ಲಿ ಆತ್ಮಾವಲೋಕನ ಸಭೆ ನಡೆಸಿ ದೊಡ್ಡ ಮಟ್ಟದ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತ ಬಂಧುಗಳಿಗೆ ಪಕ್ಷದ ವತಿಯಿಂದ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೇಮನೆ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗಜಾನನ ಗುನಗಾ, ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ, ಜಿಲ್ಲಾ ಕಾರ್ಯಕಾರಣಿ ಪದಾಧಿಕಾರಿಗಳಾದ ಉಮೇಶ್ ಭಾಗ್ವತ್ , ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಎನ್ ಗಾಂವ್ಕರ್, ಉಪಸ್ಥಿತರಿದ್ದರು.




Prathidvani Yellapura