Breaking News

ಸಾಧಕರ ಮನೆಗೆ ಸಾಹಿತ್ಯ ಪರಿಷತ್ತು ; ಪಂ. ಗಣಪತಿ ಭಟ್ಟ ಹಾಸಣಗಿ ಅವರಿಗೆ ಸನ್ಮಾನ…

,ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಮಧ್ಯಪ್ರದೇಶ ಸರ್ಕಾರದ ಪ್ರತಿಷ್ಠಿತ ತಾನ್ ಸೇನ್ ಸಮ್ಮಾನ್ ಪುರಸ್ಕಾರಕ್ಕೆ ಭಾಜನರಾದ, ನಮ್ಮ ನಾಡಿನ ಶ್ರೇಷ್ಠ ಸಂಗೀತ ವಿದ್ವಾಂಸಂ ತಾಲೂಕಿನ ಪಂ.ಗಣಪತಿ ಭಟ್ ರಂದು ಹಾಸಣಗಿಯವರನ್ನು ಯಲ್ಲಾಪುರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನವತಿಯಿಂದ ಡಿ.17 ರಂದು ಸನ್ಮಾನಿಸಿ ಗೌರವಿಸಲಾಯಿತು.


ಸನ್ಮಾನಿತರಾದ ಪಂ.ಗಣಪತಿ ಭಟ್ ಹಾಸಣಗಿಯವರು ಕೃತಜ್ಞತೆಯ ಮಾತುಗಳನ್ನಾಡಿದರು.


ಸಾಧಕರ ಮನೆಗೆ ಸಾಹಿತ್ಯ ಪರಿಷತ್ತು ಕಾರ್ಯಕ್ರಮದ ಅಡಿಯಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿದ್ವಾನ್ ಸುಬ್ರಹ್ಮಣ್ಯ ಭಟ್ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಶ್ರೀರಂಗ ಕಟ್ಟಿ, ಆರ್.ಎನ್.ದುಂಡಿ, ನಾಗೇಂದ್ರ ಭಟ್ಟ ಕುಂಬಾರಕುಳಿ, ಸೂರ್ಯನಾರಾಯಣ ಭಟ್ಟ ಮಾಳಕೊಪ್ಪ, ಕೃಷ್ಣ ಭಟ್ಟ ನಾಯಕನಕೆರೆ, ಯಮುನಾ ನಾಯ್ಕ, ಯು.ಎಸ್.ಭಟ್ಟ, ವಿಶ್ವೇಶ್ವರ ಗಾಂವ್ಕಾರ್, ನಾಗರಾಜ ಮದ್ಗುಣಿ ಹಾಗೂ ಗ್ರಾಮಸ್ಥರು ಇದ್ದರು.
ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಜಿ.ಎನ್.ಭಟ್ ತಟ್ಟಿಗದ್ದೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ನಿರ್ವಹಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *