
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಯಲ್ಲಾಪುರ ಪೊಲೀಸರಿಂದ ” ಏರಿಯಾ ಡಾಮಿನೇಷನ್ ” ಕಾರ್ಯಾಚರಣೆ ಯಶಸ್ವಿಯಾಗಿ ನಡೆಯಿತು.

ಪಟ್ಟಣದ ಪ್ರಮುಖ ರಸ್ತೆಯಲ್ಲಿ, ಬೀದಿಗಳಲ್ಲಿ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಶನಿವಾರ ಸಂಯುಕ್ತ ಕಾರ್ಯಾಚರಣೆ ನಡೆಸಿ, ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಮತ್ತು ಅಪರಾಧಿಗಳಲ್ಲಿ ಭಯ ಹುಟ್ಟಿಸುವ ಕಾರ್ಯ ಮಾಡಲಾಯಿತು.

ಸಾರ್ವಜನಿಕರಲ್ಲಿ ಕಾನೂನು ಸುರಕ್ಷತೆಯ ವಿಶ್ವಾಸ ಸಮಾಜದಲ್ಲಿ ಶಾಂತಿ ನೆಲೆಸುವ ವಾತಾವರಣ, ನಾಗರಿಕರಲ್ಲಿ ಕಾನೂನಿನ ಪ್ರಜ್ಞಾವಂತಿಕೆ, ಅಪರಾಧಗಳನ್ನು ತಡೆಯುವಲ್ಲಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವಲ್ಲಿ ಈ ಕಾರ್ಯಾಚರಣೆ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ ಎನ್ನುತ್ತಾರೆ ಹಿರಿಯ ಅಧಿಕಾರಿಗಳು.

ಪಿಎಸ್ಐ ಗಳಾದ ರಾಜಶೇಖರ ವಂದಲಿ, ಸಿದ್ದಪ್ಪ ಗುಡಿ, ಮಹಾವೀರ ಕಾಂಬ್ಳೆ, ಎಎಸ್ಐ ಗಳು,ಪುರುಷ ಮತ್ತು ಮಹಿಳಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಹೆಜ್ಜೆ ಹಾಕಿದರು.











Prathidvani Yellapura