Breaking News

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಎಸ್.ಐ.ಆರ್. ಸಭೆ ನಡೆಸಿದ ಶಾಸಕ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಮತದಾರರ ಪಟ್ಟಿಯು ನಿಖರ ಹಾಗೂ ದೋಷರಹಿತವಾಗಿರುವುದು ಪ್ರಜಾಪ್ರಭುತ್ವದ ಬಲವರ್ಧನೆಗೆ ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಆರ್. ಕಾರ್ಯವನ್ನು ಜವಾಬ್ದಾರಿಯುತವಾಗಿ ಹಾಗೂ ಪಾರದರ್ಶಕವಾಗಿ ಕೈಗೊಳ್ಳಬೇಕಿದೆ.  ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ವಿಶೇಷ ಕಾಳಜಿ ವಹಿಸುವಂತೆ ಅಧಿಕಾರಿಗಳು ಹಾಗೂ ಬಿ.ಎಲ್.ಎ.-2 ಪ್ರತಿನಿಧಿಗಳಿಗೆ ನಿರ್ದೇಶನ ನೀಡಿದ್ದು ಎಸ್.ಐ.ಆರ್ ಪ್ರಕ್ರಿಯೆ ಯಶಸ್ವಿಯಾಗಲಿ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಪ್ರಕ್ರಿಯೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ   ಯಲ್ಲಾಪುರ ತಾಲೂಕಿನ ಕುಂದರಗಿ, ಹಿತ್ಲಳ್ಳಿ ಹಾಗೂ ಉಮ್ಮಚಗಿ, ಹಾಸಣಗಿ, ಕಂಪ್ಲಿ ಗ್ರಾಮಗಳಲ್ಲಿ ಎಸ್.ಐ.ಆರ್. ಸಭೆಗಳನ್ನು ನಡೆಸಿ ಮಾತನಾಡಿದರು.

ಸಭೆಗಳಲ್ಲಿ ಆಯಾ ವ್ಯಾಪ್ತಿಗೆ ಸಂಬಂಧಿಸಿದ ಬಿ.ಎಲ್.ಎ.-2 ಪ್ರತಿನಿಧಿಗಳಿಂದ ಬೂತ್‌ವಾರು ಮಾಹಿತಿಯನ್ನು ಪಡೆದು ಪರಿಶೀಲಿಸಿದ ಶಾಸಕರು, ಎಸ್.ಐ.ಆರ್. ಪ್ರಕ್ರಿಯೆಯ ಪ್ರಗತಿ, ಮತದಾರರ ಪಟ್ಟಿಯ ಪರಿಷ್ಕರಣೆ, ಹೊಸ ಮತದಾರರ ನೋಂದಣಿ, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ದಾಖಲೆಗಳ ಕುರಿತು ಸಮಗ್ರ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಪಕ್ಷದ ಪದಾಧಿಕಾರಿಗಳು, ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಬಿ.ಎಲ್.ಎ.-2 ಪ್ರತಿನಿಧಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *