Breaking News

ಶೂನ್ಯ ದಾಖಲೆಯ ಕಳಚೆ ಪ್ರೌಢಶಾಲೆ ಹುಣಶೆಟ್ಟಿಕೊಪ್ಪಕ್ಕೆ ಸ್ಥಳಾಂತರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕಳಚೆ ಗ್ರಾಮದಲ್ಲಿದ್ದ ಪ್ರೌಢಶಾಲೆಯು ವಿದ್ಯಾರ್ಥಿಗಳ ಕೊರತೆಯಿಂದಾಗಿ ಮುಚ್ಛಲ್ಪಟ್ಟಿದ್ದು ಅದೇ ಶಾಲೆಯನ್ನು ಮದನೂರು ಗ್ರಾ.ಪಂ ವ್ಯಾಪ್ತಿಯ ಹುಣಶೆಟ್ಟಿಕೊಪ್ಪಕ್ಕೆ ಸ್ಥಳಾಂತರಿಸಲಾಗಿದೆ.
ಈ ಸ್ಥಳಾಂತರ ಪ್ರಕ್ರಿಯೆಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ.ಎಸ್. ಪಾಟೀಲ, ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ, ಹಾಗೂ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್ ಗಾಂವ್ಕರ ಪ್ರಯತ್ನದಿಂದ ಶಿಕ್ಷಣ ಸಚಿವ ಮಧುಬಂಗಾರಪ್ಪನವರ ಸಹಕಾರದಿಂದ ಕಾರ್ಯಸಾಧುವಾಗಿದ್ದು ಜನತೆಯ ಪರವಾಗಿ ಅಭಿನಂದನೆಗಳು ಎಂದು ಬ್ಲಾಕ್ ಕಾಂಗ್ರೆಸ್ ತಾಲೂಕಾ ವಕ್ತಾರ ರವಿ ನಾಯ್ಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *