
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ಮೇ.10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿ.ಎಸ್.ಪಾಟೀಲ, ಬಿಜೆಪಿ ಅಭ್ಯರ್ಥಿಯಾಗಿ ಶಿವರಾಮ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದಾರೆ.
ಎರಡು ರಾಷ್ಟ್ರೀಯ ಪಕ್ಷಗಳ ಘಟಾನುಘಟಿಗಳಿಗಳ ಮದ್ಯೆ ಕಾಂಗ್ರೆಸ್ನಿಂದ ಟಿಕೆಟ್ ವಂಚಿತರಾಗಿ ಅಸಮಧಾನಗೊಂಡಿದ್ದ ಪ್ರಬಲ ಆಕಾಂಕ್ಷಿ ಮುಂಡಗೋಡು ತಾಲೂಕಿನ ಕಲಕೇರಿ ಗ್ರಾಮದ ನಿವಾಸಿ ಲಕ್ಷ್ಮಣ ಬನ್ಸೋಡೆ ಸೋಮವಾರ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಮಂಗಳವಾರ ಪಟ್ಟಣದ ಮಂಜುನಾಥನಗರ ನಿವಾಸಿ ಆನಂದ ಗಣಪತಿ ಭಟ್ಟ ಎಂಬುವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಅಧಿಕಾರಿ ಅಜ್ಜಪ್ಪ ಸೊಗಲದ ಅವರ ನಾಮಪತ್ರ ಸ್ವೀಕರಿಸಿದರು.

ಲಕ್ಷ್ಮಣ ಬನ್ಸೋಡೆ ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿ ಈ ಮೊದಲು ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದರು. ಕೊನೆಗಳಿಗೆಯಲ್ಲಿ ಟಿಕೆಟ್ ವಿ.ಎಸ್ ಪಾಟೀಲ್ ಪಾಲಾಗಿದ್ದು ಪಕ್ಷದ ಆಯ್ಕೆಯ ಕುರಿತು ವಿರೋಧಿಸಿ ಸುದ್ದಿಗೋಷ್ಠಿ ನಡೆಸಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು.
ಆನಂದ ಗಣಪತಿ ಭಟ್ಟ ಎಂಬುವರು ಭ್ರಷ್ಟಾಚಾರ ವಿರೋಧಿ ಆಂದೋಲನದ ಭಾಗವಾಗಿ ಕಳೆದೊಂದು ತಿಂಗಳ ಹಿಂದೆ ಗ್ರಾಮದೇವಿ ಜಾತ್ರೆಯ ಸಂದರ್ಭದಲ್ಲಿ ಅಲ್ಲಲ್ಲಿ ಪೋಸ್ಟರ್, ಬ್ಯಾನರ್ಗಳನ್ನು ಹಾಕಿ ಚುನಾವಣಾ ಕಣದಲ್ಲಿ ಸ್ಪರ್ಧಿಸುವ ಸೂಚನೆ ನೀಡಿದ್ದರು.
Prathidvani Yellapura