Breaking News

ಜಿದ್ದಾಜಿದ್ದಿನ ಕದನ ಆನಗೋಡು ಪ್ರಾಥಮಿಕ ಪತ್ತಿನ ಸಹಕಾರಿ ಸಂಘಕ್ಕೆ ಚುನಾವಣೆ.


ಯಲ್ಲಾಪುರ ; ತಾಲೂಕಿನ ಆನಗೋಡು ಪ್ರಾಥಮಿಕ ಪತ್ತಿನ ಸಹಕಾರಿ ಸಂಘಕ್ಕೆ ಭಾನುವಾರ ತುರುಸಿನ ಚುನಾವಣೆ ನಡೆಯಿತು.


ರಾಜ್ಯ ವಿಧಾನಸಭಾ ಚುನಾವಣೆಗಿಂತಲು ಹೆಚ್ಚು ಕುತೂಹಲ ಕೆರಳಿಸಿದ ಆನಗೋಡು ಸೊಸೈಟಿ ಚುನಾವಣೆಗೆ ಹಿಂದಿನ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಸಿಕುಂಬ್ರಿ ತಂಡ ಹಾಗೂ ಗಣಪತಿ ಭಟ್ಟ ಕರುಮನೆ ತಂಡದ ನಡುವೆ ಜಿದ್ದಾ ಜಿದ್ದಿನ ಸ್ಪರ್ಧೆ ಇದೆ.
ಸಾಲಗಾರ ಕ್ಷೇತ್ರದ 947 ಮತದಾರರು, ಹಾಗೂ ಸಾಲಗಾರರಲ್ಲದ ಕ್ಷೇತ್ರದ 150 ಮತದಾರರು ಸೇರಿ ಒಟ್ಟೂ 1097 ಮತದಾರರು ಮತ್ತು ಮತದಾರ ಪಟ್ಟಿಯಲ್ಲಿ ಹೆಸರು ಇಲ್ಲದೇ ನ್ಯಾಯಾಲಯದ ಮೊರೆಹೋಗಿ ಆದೇಶವಾಗಿ ಪಡೆದ ಮತದಾನದ ಹಕ್ಕಿನ 223 ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.


ಮತಗಟ್ಟೆ ಅಧಿಕಾರಿ ಸುನೀಲ ತೇಲಕರ್ ನೇತ್ರತ್ವದಲ್ಲಿ ಶಾಂತಿ ಹಾಗೂ ಸುವ್ಯವಸ್ಥಿತ ರೀತಿಯಿಂದ ಚುನಾವಣೆ ನಡೆದಿದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಚುನಾವಣ ಪ್ರಕ್ರಿಯೆಗೆ ಸಹಕರಿಸಲು ಪೊಲೀಸರು ಭದ್ರತೆ ಕಲ್ಪಿಸಿದ್ದರು. ಉಚ್ಚ ನ್ಯಾಯಾಲಯದ ಆದೇಶದಂತೆ ಜೂನ್ 26 ರಂದು ಮತ ಎಣಿಕೆ ನಡೆಯಲಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *