Breaking News

ಕಲುಷಿತಗೊಂಡ ಆರ್ತಿಬೈಲ್ ಘಟ್ಟದ ಹಳ್ಳದ ನೀರು – ಸದ್ಯಕ್ಕೆ ಬಳಸದಂತೆ ಡಾ,ಪವಾರ್ ಎಚ್ಚರಿಕೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಯಲ್ಲಾಪುರ – ಆರತಿ ಬೈಲ ಕ್ರಾಸ್‌ ಹತ್ತಿರದ ಹಳ್ಳದ ನೀರು ಕಲುಷಿತಗೊಂಡಿದ್ದು, ನೊರೆ ತುಂಬಿ ಹರಿಯುತ್ತಿದೆ. ಇದ್ದಕ್ಕಿದ್ದಂತೆ ಈ ರೀತಿಯಾದಕಾರಣ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದ್ದಾರೆ.

ಆರೋಗ್ಯ ಇಲಾಖೆ ಸಿಬ್ಬಂದಿಗಳು ನೀರಿನ ಮಾದರಿಯನ್ನು ಸಂಗ್ರಹಿಸಿ ಆರೋಗ್ಯ ಇಲಾಖೆಯಲ್ಲಿ ಪರೀಕ್ಷೆಗೆ ಕಳುಹಿಸಲಾಗಿದ್ದು  ಮತ್ತೊಂದು ಮಾದರಿಯನ್ನು ಗ್ರಾಮ ಪಂಚಾಯತನಿಂದ ಕಾರವಾರಕ್ಕೆ ಕೂಡಲೇ ಪರೀಕ್ಷೆಗಾಗಿ ರವಾನಿಸಲಾಗಿದೆ.

ಕಾರಣ ಇಡಗುಂದಿ, ಗರವಾಸ, ಚಿನ್ನಾಪುರ, ದೋಣಗಾರ ಇನ್ನಿತರೆ ಗ್ರಾಮದ ಸಾರ್ವಜನಿಕರು ಈ ನೀರನ್ನು ಮನುಷ್ಯರಿಗೆ ಆಗಲಿ ಅಥವಾ ಪ್ರಾಣಿಗಳಿಗಾಗಲಿ ಯಾವುದೇ ರೀತಿಯ ಬಳಕೆಗೆ ಸದ್ಯದ ಪರಿಸ್ಥಿತಿಯಲ್ಲಿ ಬಳಸಬಾರದೆಂದು ತಾಲೂಕಾ ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ ವಿನಂತಿಸಿದ್ದಾರೆ.

ಮಾಹಿತಿ ದೊರೆತ ಕೂಡಲೇ ಆರೋಗ್ಯ ಇಲಾಖೆ ಸಿಬ್ಬಂದಿಗಳಾದ  ವಿ. ಎಲ್.‌ ಶಿರೂರ, ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ, ಪರುಶರಾಮ ಡೊಣುರ, ಸಮುದಾಯ ಆರೋಗ್ಶಾಧಿಕಾರಿ, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಚನ್ನವೀರಪ್ಪಾ ಕಂಬಾರ ಹಾಗೂ ಪೋಲಿಸ್‌ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನೀರಿನ ಮಾದರಿ ಸಂಗ್ರಹಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *