Breaking News

ಪಾರದರ್ಶಕ ನ್ಯಾಯಸಮ್ಮತ ಶಾಂತಿಯುತ ಮತದಾನಕ್ಕೆ ನಮ್ಮ ಆದ್ಯತೆ – ಅಜ್ಜಪ್ಪ ಸೊಗಲದ

ಯಲ್ಲಾಪುರ : ಪಾರದರ್ಶಕ ಮತ್ತು ನ್ಯಾಯಸಮ್ಮತ ಮತದಾನಕ್ಕಾಗಿ ಚುನಾವಣಾ ಪ್ರಕ್ರಿಯೆ ಸಿದ್ಧವಾಗುತ್ತಿದ್ದು 81-ಯಲ್ಲಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ವ್ಯವಸ್ಥೆಯ ಕುರಿತು ಕಾಲಕಾಲಕ್ಕೆ ಮಾಹಿತಿ ನೀಡಲಿದ್ದೇನೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಅಜ್ಜಪ್ಪ ಸೊಗಲದ ಹೇಳಿದರು.


ಅವರು ಪಟ್ಟಣದ ತಾಲೂಕು ಆಳಿತ ಸೌಧದಲ್ಲಿ ಕರೆಯಲಾದ ಸುದ್ಧಿಗೋಷ್ಠಿಯಲ್ಲಿ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ಕುರಿತು ಮಾಹಿತಿ ನೀಡಿ ಮಾತನಾಡಿದರು.


ಯಲ್ಲಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 233 ಮತಗಟ್ಟೆಗಳಿದ್ದು 21 ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. 93,058 ಪುರುಷ ಮತದಾರರು, 91,542 ಮಹಿಳಾ ಮತದಾರರು ಸೇರಿದಂತೆ ಒಟ್ಟು 1,84,600 ಮತದಾರರು ಮತ ಚಲಾಯಿಸಲಿದ್ದಾರೆ. ಅವುಗಳಲ್ಲಿ 2268 ವಿಶೇಷ ಚೇತನ ಮತದಾರರು, 85 ವರ್ಷ ಮೇಲ್ಪಟ್ಟ ಹಿರಿಯ ಮತದಾರರ ಸಂಖ್ಯೆ 1684 ಇದೆ. ಒಟ್ಟು 6 ಚೆಕ್‌ಪೋಸ್ಟ್ಗಳಿದ್ದು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತದೆ. ಯಲ್ಲಾಪುರದ ಕಿರವತ್ತಿಯಲ್ಲಿ 1, ಮುಂಡಗೋಡಿನ ಅಗಡಿ, ಸನವಳ್ಳಿ ಮತ್ತು ಬಾಚಣಕಿ ಸೇರಿದಂತೆ 3, ಶಿರಸಿಯ ದಾಸನಕೊಪ್ಪ ಮತ್ತು ತಿಗಣಿ  2 ಚೆಕ್‌ಪೋಸ್ಟ್ಗಳಿವೆ. 18 ಎಸ್.ಎಸ್.ಟಿ, 9 ಫ್ಲಯಿಂಗ್ ಸ್ಕ್ವಾಡ್ ತಂಡಗಳು ಹಾಗೂ 6 ವಿ.ಎಸ್.ಟಿ ತಂಡಗಳನ್ನು ರಚಿಸಲಾಗಿದೆ ಎಂದು ವಿವರಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *