Breaking News

ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಹಣಕ್ಕೆ ಬರ ಬಂದಿದೆ – ಹೆದ್ದಾರಿಯಲ್ಲಿ ಊರುಗಳ ಮಾಹಿತಿ ಫಲಕ ಅದಕ್ಕೆ ಮಂಕಾಗಿದೆ.


ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಹಾದು ಹೋಗಿರುವ ಬಳ್ಳಾರಿ ಕಾರವಾರ ರಾಷ್ಟ್ರೀಯ ಹೆದ್ದಾರಿ ಅಕ್ಕ ಪಕ್ಕದಲ್ಲಿ ಹಾಕಿರುವ ತಲುಪುವ ಊರುಗಳ ಮಾರ್ಗಸೂಚಿ ಫಲಕಗಳು ಮಸುಕಾಗಿದ್ದು ಪುರಾತನ ಕಾಲದ ಅಳಿದುಳಿದ ಶಾಸನದಂತೆ ಭಾಸವಾಗುತ್ತಿದೆ.

ಪ್ರಯಾಣಿಕರ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಇಲಾಖೆ ತನ್ನ ಘನತೆ ಉಳಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಈ ಕೂಡಲೆ ಮಾಸಿಹೋದ ಫಲಕಗಳನ್ನು ಬದಲಿಸಬೇಕಿದೆ ಎಂಬುದು ವಾಹನ ಸವಾರರ ಆಗ್ರಹವಾಗಿದೆ.


ಪರ ಊರುಗಳಿಂದ ಮತ್ತೊಂದು ಊರಿಗೆ ತೆರಳುವ ಪ್ರವಾಸಿಗರಿಗೆ ಸರಕು ಸಾಗಾಣಿಕೆ ವಾಹನಗಳಿಗೆ ಒಟ್ಟಾರೆ ಪ್ರಯಾಣಿಕರಿಗೆ ಊರುಗಳ ಹೆಸರು,ಕಿಲೋಮೀಟರ್ ಗಳ ಮಾಹಿತಿ ಮತ್ತು ಸಂಚರಿಸುವ ದಿಕ್ಕಿನ ಮಾಹಿತಿ ಅತ್ಯಂತ ಉಪಯುಕ್ತವಾಗಿರುತ್ತದೆ ಅದನ್ನು ಸಮರ್ಪಕವಾಗಿ ನೀಡಲು ಅಸಾದ್ಯ ಎಂದಾದರೆ ನಿರ್ವಹಣೆ ಇಲಾಖೆಯ ಕೆಲಸಕ್ಕೆ ಬೆಲೆ ಇಲ್ಲವಾಗಲಿದೆ ಅಲ್ಲದೆ ಇಲಾಖೆಯ ಘನತೆ ಮಣ್ಣು ಪಾಲಾಗಲಿದೆ ಈ ಎಲ್ಲಾ ಹಿನ್ನೆಲೆಯಲ್ಲಿ ಕೂಡಲೆ ಕಾರ್ಯಪ್ರವೃತ್ತರಾಗಬೇಕಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯ ಆಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *