Breaking News

ಯಲ್ಲಾಪುರದ ಕೆನರಾ ಬ್ಯಾಂಕ್ ಜನರೇಟರೊಳಗೊಬ್ಬ ಮಾನಸಿಕ ಅಸ್ವಸ್ಥ


ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ವೆಂಕಟರಮಣ ಮಠದ ಕಟ್ಟಡದಲ್ಲಿರುವ ಕೆನರಾಬ್ಯಾಂಕ್‌ಗೆ ಸಂಬAಧಿಸಿದ ಜನರೇಟರ್ ಪೆಟ್ಟಿಗೆಯೊಳಗೆ ಮಾನಸಿಕ ಅಸ್ವಸ್ಥನಂತಿರುವ ಯುವಕನೊಬ್ಬ ಅವಿತು ಕುಳಿತಿದ್ದು ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.


ಕೆನರಾ ಬ್ಯಾಂಕ್ ಜನರೇಟರ್ ಡಬ್ಬಿಯೊಳಗೆ ಅವಿತು ಕುಳಿತಿದ್ದ ಮಾನಸಿಕ ಅಸ್ವಸ್ಥನಂತಿರುವ ಯುವಕ ಯಾವಾಗ ಮತ್ತು ಎಷ್ಟು ದಿನದಿಂದ ಒಳಗಿದ್ದ ಎಂಬುದು ಯಾರಿಗೂ ತಿಳಿದಿಲ್ಲ. ಬ್ಯಾಂಕ್ ಸಿಬ್ಬಂದಿ ಶನಿವಾರ ಮದ್ಯಾಹ್ನ ಜನರೇಟರ್ ಆನ್ ಮಾಡಲು ತೆರಳಿದಾಗ ಜನರೇಟರ್ ಬಾಗಿಲು ಮುರಿದಿರುವುದು ಕಂಡು ಬಂದಿದೆ. ಅನುಮಾನಗೊಂಡು ಬಾಗಿಲು ಸರಿಸಿ ಒಳನೋಡಿದರೆ ಒಳಗಿನ ಇಕ್ಕಟ್ಟಾದ ಸ್ಥಳದಲ್ಲಿ ಯುವಕನೋರ್ವ ಮಲಗಿರುವುದು ಕಂಡು ಬಂದಿದೆ. ಗಾಬರಿಗೊಂಡ ಸಿಬ್ಬಂದಿ ಬ್ಯಾಂಕಿನ ವ್ಯವಸ್ಥಾಪಕರಿಗೆ ತಿಳಿಸಿದ್ದಾನೆ. ವ್ಯವಸ್ಥಾಪಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಸ್ಥಳಕ್ಕಾಗಮಿಸಿದ ಪೊಲೀಸರು ಆತನನ್ನು ಹೊರತಂದು ವಿಚಾರಿಸಿದಾಗ ಅಸ್ಪಷ್ಟವಾಗಿ ಹಿಂದಿ ಮಾತನಾಡುತ್ತಾನೆ. ಮಹಿಳೆಯರ ಚಪ್ಪಲಿ ಹಾಗೂ ಯಾವುದೋ ಕೆಲಸದ ಮೇಲಿರುವಂತಹ ಧಿರಿಸು ಧರಿಸಿದ್ದಾನೆ. ಬಲವಾಗಿ ಕೇಳಿದಾಗ ಕಿಷನ್ ಎಂಬ ಹೆಸರು ಬಿಟ್ಟರೆ ಮತ್ತೇನೂ ಹೇಳುವುದಿಲ್ಲ. ಕೊನೆಗೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದು ಬಿಟ್ಟಿದ್ದಾರೆ. ಆದರೆ ಜನರೇಟರ್ ಒಳಗಿದ್ದಾಗ ಸ್ಟಾರ್ಟ್ ಆಗುವ ವೈರ್ ತುಂಡರಿಸಿದ್ದಾನೆ. ಮೇಲ್ನೋಟಕ್ಕೆ ಮಾನಸಿಕ ಅಸ್ವಸ್ಥನಂತೆ ಕಾಣದಿದ್ದರೂ ನಡವಳಿಕೆಯಲ್ಲಿ ಮಾತ್ರ ಮಾನಸಿಕ ಅಸ್ವಸ್ಥನಂತಿದ್ದಾನೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *