Breaking News

ಯಲ್ಲಾಪುರ ತಾಲೂಕಿನ ಮಣ್ಣಿನ ಕುಡಿ ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ 30 ನೆ ರ‍್ಯಾಂಕ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸುಚೇತ್ ಬಾಳ್ಕಲ್ UPSC ನಡೆಸುವ ಸಿವಿಲ್ ಸರ್ವಿಸ್ ನ ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ 30 ನೇ ರಾಂಕ್ ಗಳಿಸುವ ಮೂಲಕ ರಾಜ್ಯಕ್ಕೆ ಹೆಮ್ಮೆ ತಂದಿರುತ್ತಾರೆ.

UPSC ನಡೆಸುವ ಸಿವಿಲ್ ಸರ್ವಿಸ್ ನ ಪ್ರೆಲಿಮ್ಸ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಮೂಲಕ ಭಾರತೀಯ ಅರಣ್ಯ ಸೇವೆಗೆ ಆಯ್ಕೆಯಾದ ಇವರು ಮೈನ್ಸ್ ಮತ್ತು ಸಂದರ್ಶನದಲ್ಲೂ ಜಯಗಳಿಸಿ ಈ ಸಾಧನೆಗೈದಿರುತ್ತಾರೆ.

ಬೆಂಗಳೂರಿನ ಪ್ರಸಿದ್ಧ RV ಇಂಜಿನಿಯರಿಂಗ್ ಕಾಲೇಜು ನಲ್ಲಿ ಪದವಿ ಪಡೆದಿರುವ ಇವರು ಪ್ರತಿಷ್ಠಿತ ಕಂಪೆನಿಗಳಲ್ಲಿ ದೊರೆತ ಕೆಲಸಗಳಿಗೆ ಸೀಮಿತಗೊಳ್ಳದೇ ನಾಗರಿಕ ಸೇವೆಗಳ ಪರೀಕ್ಷಾ ತಯಾರಿಯಲ್ಲಿ ಕಳೆದ ಮೂರು ವರ್ಷಗಳಿಂದ ತೊಡಗಿಕೊಂಡಿದ್ದರು.

ನಾಲ್ಕು ದಶಕಗಳ ಇತಿಹಾಸ ಹೊಂದಿರುವ ಉತ್ತರ ಕನ್ನಡದ ಚೇತನಾ ಪ್ರಿಂಟರ್ಸ್ ನ ರಾಮಕೃಷ್ಣ ಮತ್ತು ಶ್ರೀಮತಿ ಬಾಳ್ಕಲ್ ಪುತ್ರರಾಗಿರುವ ಇವರು ಈ ಹಿಂದೆ ರಾಜ್ಯ ಮಟ್ಟದ ಕ್ವಿಜ್ ಮತ್ತು ಚರ್ಚೆಗಳಲ್ಲಿ ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದನ್ನು ಮತ್ತು SSLC ಪರೀಕ್ಷೆಯಲ್ಲಿ ಯಲ್ಲಾಪುರ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುವುದನ್ನು ಇಲ್ಲಿ ಸ್ಮರಿಸಬಹುದು. ಇವರ ಸಹೋದರಿ ಸಹನಾ ಬಾಳ್ಕಲ್ ಕೂಡ ಕರ್ನಾಟಕ ಆರ್ಥಿಕ ಇಲಾಖೆಯಲ್ಲಿ ಉಪ ಅಯ್ಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದು ಒಂದೇ ಕುಟುಂಬದಿಂದ ಇಬ್ಬರು ನಾಗರಿಕ ಸೇವೆಗೆ ಆಯ್ಕೆಯಾಗಿರುವುದು ವಿಶೇಷ

ತಾಲೂಕಿನ ಮಣ್ಣಿಗೆ ಗೌರವ ತಂದ ಶ್ರೇಷ್ಠ ಕಾರ್ಯಕ್ಕೆ ಕ್ಷೇತ್ರದ ಶಾಸಕರು ಶಿಕ್ಷಣ ಪ್ರೇಮಿ ಶಿವರಾಮ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ, ರಾ.ವಿ.ಯೋ.ಸಮಿತಿ ಉಪಾಧ್ಯಕ್ಷ ಪ್ರಮೋದ್ ಹೆಗಡೆ, ವಿವಿಧ ಸಂಘಸಂಸ್ಥೆಗಳು ಹಾಗು ಸಮಸ್ತ ತಾಲೂಕಿನ ನಾಗರಿಕರು ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *