

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ಗೋವಾದಲ್ಲಿ ನಡೆದ ಲಯನ್ಸ್ ಇಂಟರ್ ನ್ಯಾಷನಲ್ ಕಾರ್ಯಕ್ರಮದಲ್ಲಿ ಯಲ್ಲಾಪುರ ಟೌನ್ ಲಯನ್ಸ್ ಕ್ಲಬ್ ಅಧ್ಯಕ್ಷ ಸುರೇಶ್ ವಿ ಬೋರ್ಕರ್ ಗೆ ಸದಸ್ಯತ್ವ ಅಭಿಯಾನದ ಸಾಧನೆಗೆ ವಿಶೇಷ ಗೌರವ ಪ್ರಶಸ್ತಿ ಲಭಿಸಿದೆ.

ಜುಲೈ,30, ರಂದು ಪಣಜಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ದೇಶ ವಿದೇಶಗಳಿಂದ ಆಗಮಿಸಿದ ಲಯನ್ಸ್ ಕ್ಲಬ್ ಪ್ರಮುಖರ ಸಮ್ಮುಖದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಯಲ್ಲಾಪುರ ಲಯನ್ಸ್ ಕ್ಲಬ್ ನ ಎಸ್.ಎಲ್.ಭಟ್, ಲಯನ್.ಎನ್.ಎ ಭಟ್ , ಲಯನ್ ಶೇಷಗಿರಿ ಪ್ರಭು ಭಾಗವಹಿಸಿದ್ದರು.

Prathidvani Yellapura