

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ಪಠ್ಯ ಮ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿ ಜೀವನದಲ್ಲಿ ಬಹಳ ಮಹತ್ವದ ಪಾತ್ರ ನಿರ್ವಹಿಸುತ್ತದೆ ಜ್ಞಾನ ಬಲದೊಂದಿಗೆ ದೈಹಿಕ ಸಾಮರ್ಥ್ಯ ಅತ್ಯಗತ್ಯವಾಗಿದೆ.

ಪ್ರತಿಯೊಬ್ಬ ವಿದ್ಯಾರ್ಥಿ ಯಾವುದಾದರು ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕಿದೆ. ಕ್ರೀಡಾ ಸ್ಪೂರ್ತಿಯೊಂದಿಗೆ ಎಲ್ಲರು ಬೆರೆತು ಚಟುವಟಿಕೆಯಲ್ಲಿ ತೊಡಗಿಕೊಳ್ಳಿ ಎಂದು ವೈಟಿಎಸ್ಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ರವಿ ಶಾನಬಾಗ್ ಹೇಳಿದರು.

ಅವರು ಪಟ್ಟಣದ ಪ್ರತಿಷ್ಟಿತ ವೈಟಿಎಸ್ಎಸ್ ವಿದ್ಯಾ ಸಂಸ್ಥೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾದ ತಾಲೂಕು ಮಟ್ಟದ ಕಾಲೇಜು ಕ್ರೀಡಾ ಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಜಿಲ್ಲಾ ಮಟ್ಟದಲ್ಲಿ ಕ್ರೀಡೆಯಲ್ಲಿ ಹೆಸರು ಮಾಡಿದ ಕ್ರೀಡಾಪಟುಗಳು ಹೊತ್ತು ತಂದ ಕ್ರೀಡಾ ಜ್ಯೋತಿಯನ್ನು ಸಂಸ್ಥೆಯ ಅಧ್ಯಕ್ಷ ರವಿಶಾನಬಾಗ್ , ಸಹಕಾರ್ಯದರ್ಶಿ ಬಾಲಕೃಷ್ಣ ನಾಯಕ್, ಸ್ವೀಕರಿಸಿ ಶುಭಕೋರಿದರು.

ಪಟ್ಟಣದ ವೈಟಿಎಸ್ಎಸ್, ವಿಶ್ವದರ್ಶನ, ಸರ್ಕಾರಿ ಪದವಿಪೂರ್ವ ಕಾಲೇಜು ಸೇರಿದಂತೆ ತಾಲೂಕಿನ ಮಂಚಿಕೇರಿ, ಗುಳ್ಳಾಪುರ, ಕಿರವತ್ತಿ ಕಾಲೇಜುಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡವು.

ದೈಹಿಕ ಶಿಕ್ಷಕ ಗಂಗಾ ನಾಯಕ್ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ವಿಶ್ವದರ್ಶನ ಕಾಲೇಜು ಪ್ರಾಂಶುಪಾಲ ಡಿ.ಕೆ.ಗಾಂವ್ಕರ್, ಕಿರವತ್ತಿ ಕಾಲೇಜು ಪ್ರಾಂಶುಪಾಲ ಸುಬಾಷ್ ನಾಯ್ಕ್, ಯಲ್ಲಾಪುರ ಸ.ಪ.ಕಾ ಪ್ರಾಂಶುಪಾಲ ಎಸ್.ಟಿ.ವೈದ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವೈಟಿಎಸ್ಎಸ್ ಸಂಸ್ಥೆ ಪ್ರಾಂಶುಪಾಲ ಆನಂದ್ ಹೆಗಡೆ ಸ್ವಾಗತಿಸಿದರು. ಉಪನ್ಯಾಸಕಿಯರಾದ ವಾಣಿಶ್ರೀ ಹೆಗಡೆ ನಿರೂಪಿಸಿದರು. ಅಶ್ವಿನಿ ವಂದಿಸಿದರು.
ನಂತರದಲ್ಲಿ ವಿವಿಧ ಸ್ಪರ್ಧೆಗಳು ಜರುಗಿದವು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು.






Prathidvani Yellapura