Breaking News

ಬಾರೋ ಬಾರೋ ಮಳೆರಾಯ ಯಲ್ಲಾಪುರ ತಾಲೂಕಿಗೆ ನೀರಿಲ್ಲ ಕೃಷಿ ಚಟುವಟಿಕೆ ನಡೀತಿಲ್ಲ…!!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಜೂನ್ ತಿಂಗಳಿನ ಅರ್ಧ ಭಾಗ ಕಳೆದು; ಈವರೆಗೂ  ಮಳೆಗಾಲ ಆರಂಭವಾಗದೇ; ಮುಂಗಾರಿನ ಮುನ್ಸೂಚನೆಯೂ ಕಾಣಿಸದೇ ರೈತರು ಹಾಗೂ ಜನರು ಕುಡಿಯುವ ನೀರಿನ ಸಮಸ್ಯೆ, ಬಿಸಿಲಿನ ತಾಪ ಮತ್ತು ಕೃಷಿ ಕಾರ್ಯಗಳ ಹಿನ್ನಡೆಯಿಂದ ತೀವ್ರ ಆತಂಕಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಉತ್ತಮ ಮಳೆಗಾಗಿ ಪ್ರಾರ್ಥಿಸಿ ತಾಲೂಕಿನ ಗಡಿ ಭಾಗದ ಉಚಗೇರಿಯ ಕದಳಿ ನಂದಿಕೇಶ್ವರ ದೇವಸ್ಥಾನದಲ್ಲಿ ಸೋಮವಾರ ರುದ್ರಾಭಿಷೇಕ ಹಾಗೂ ಪರ್ಜನ್ಯ ಮತ್ತಿತರ ದೇವತಾ ಕಾರ್ಯಕ್ರಮಗಳು ನಡೆದವು

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಧನಂಜಯ ಹೆಗಡೆ ನೇತೃತ್ವದಲ್ಲಿ ವೈದಿಕರಾದ ವಿಘ್ನೇಶ್ವರ ಭಟ್ಟ ಕನೇನಹಳ್ಳಿ ದೇವತಾ ಪೂಜೆಯನ್ನು ನೆರವೇರಿಸಿದರು. ಸ್ಥಳೀಯರಾದ ಮಂಜುನಾಥ ಶಾಸ್ತಿç, ಕೃಷ್ಣ ಹೆಗಡೆ, ದತ್ತಾತ್ರೇಯ ಹೆಗಡೆ, ಶುಭಾಂಗ ಹೆಗಡೆ, ಚಿನ್ಮಯ ಹೆಗಡೆ, ಶಾಂತಾರಾಮ ಹೆಗಡೆ, ಸೋಮನಾಥ ಜೋಷಿ, ಎನ್.ಆರ್.ಹೆಗಡೆ, ಗಣಪತಿ ಹೆಗಡೆ, ನಾರಾಯಣ ಹೆಗಡೆ, ನಾರಾಯಣ ನಾಯ್ಕ, ಭಾಸ್ಕರ ನಾಯ್ಕ ಮತ್ತು ಉಚಗೇರಿ, ಚಿಪಗೇರಿ, ಜಕ್ಕೋಳ್ಳಿ ಹಾಗೂ ಸವಣೆ ಗ್ರಾಮಗಳ ಸಾರ್ವಜನಿಕ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *