
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ಕಳೆದೆರಡು ದಿನಗಳಿಂದ ಘಟ್ಟದ ಮೇಲ್ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು ಹಳ್ಳ-ಕೊಳ್ಳಗಳು, ನದಿ-ತೊರೆಗಳು ತುಂಬಿ ಹರಿಯುತ್ತಿವೆ. ಮಂಗಳವಾರ 140.6ಮಿ.ಮೀ ಮಳೆಯಾಗಿದ್ದು ಸುರಿದ ಧಾರಾಕಾರ ಮಳೆಗೆ ತಾಲೂಕಿನ ಕೆಲವೆಡೆ ಅವಾಂತರ ಸೃಷ್ಟಿಯಾಗಿದೆ.

ಹಾಸಣಗಿ ಪಂಚಾಯತ ವ್ಯಾಪ್ತಿಯ ಕೊಟಗೇರಿ ಕರಿಯಮ್ಮ ದೇವಿ ದೇವಸ್ಥಾನದ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದ್ದು ದೇವಸ್ಥಾನ ಸಂಪೂರ್ಣ ಹಾನಿಗೊಳಗಾಗಿದೆ.

ಪ.ಪಂ ವ್ಯಾಪ್ತಿಯ ಸಹಸ್ರಳ್ಳಿಯಲ್ಲಿ ವೆಂಕಟ್ರಮಣ ಮಹಾಬಲೇಶ್ವರ ಭಟ್ಟ ಅವರಿಗೆ ಸೇರಿದ ಆಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದೆ.
ಇನ್ನೂ ಹಲವೆಡೆ ಸಣ್ಣಪುಟ್ಟ ಸಮಸ್ಯೆಗಳಾಗಿದ್ದು ಮಳೆಯ ಪ್ರಮಾಣ ಇದೇ ರೀತಿ ಮುಂದುವರೆದಲ್ಲಿ ಮತ್ತಷ್ಟು ಅವಾಂತರ ಸೃಷ್ಟಿಯಾಗುವ ಸಾಧ್ಯತೆಗಳಿವೆ.


Prathidvani Yellapura