Breaking News

ಯಲ್ಲಾಪುರದಲ್ಲಿ ಮತದಾನ ಜಾಗೃತಿ ವಿಡಿಯೋ ಸ್ಕ್ರೀನ್ ಪ್ರಸಾರ ಮತ್ತು ಜಾಗೃತ ಪತ್ರ ವಿತರಣೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ಚನಿ ಯಲ್ಲಾಪುರ : ಪಟ್ಟಣದ ಬಸ್ ನಿಲ್ದಾಣದಲ್ಲಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಜೆಗಳಿಗಿರುವ ಮತದಾನವೆಂಬ ಸಾರ್ವಭೌಮ ಅಧಿಕಾರದ ಮಹತ್ವ ಸಾರುವ ವಿಡಿಯೋ ಸ್ಕ್ರೀನ್ ಜಾಗೃತಿ ಪ್ರಚಾರ ಮತ್ತು ಜಾಗೃತಿ ಪತ್ರ ವಿತರಣೆ ಕಾರ್ಯಕ್ರಮ ಜರುಗಿತು.


ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಜ್ಯೋತಿ ಉಪ್ಪಾರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸ್ ನಿಲ್ದಾಣದಲಿದ್ದ ಪ್ರಯಾಣಿಕರಿಗೆ ಸುತ್ತಮುತ್ತಲಿನ ಅಂಗಡಿಕಾರರಿಗೆ ಮತದಾನದ ಮಹತ್ವದ ಬಗ್ಗೆ ವಿವರಿಸಿ ಹೇಳಿ ಜಾಗೃತಿ ಪತ್ರ ನೀಡಿದರು. ತಪ್ಪದೆ ಮತದಾನ ಮಾಡುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಇತರೆ ಸಿಬ್ಬಂದಿಗಳು ಜೊತೆಯಲಿದ್ದು ಸಹಕರಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *