Breaking News

CET ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ನಡೆಯನ್ನು ಖಂಡಿಸುತ್ತೇನೆ – ಶಾಸಕ ಹೆಬ್ಬಾರ್

ಪ್ರತಿಧ್ವನಿ ಯಲ್ಲಾಪುರದ ಸುದ್ದಿಗಳಿಗಾಗಿ ವಾಟ್ಸಪ್ ಗುಂಪಿಗೆ ಸೇರಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

ಯಲ್ಲಾಪುರ : ಸಿ.ಇ.ಟಿ ಪರೀಕ್ಷೆಯ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಬ್ರಾಹ್ಮಣ ಸಮುದಾಯದ ಒಬ್ಬ ವಿದ್ಯಾರ್ಥಿಯನ್ನು ಆತ ಧರಿಸಿದ ಜನಿವಾರವನ್ನು ಕತ್ತರಿಸಿ ಪರೀಕ್ಷೆಗೆ ಪ್ರವೇಶ ನೀಡಿರುವುದನ್ನು ಹಾಗೂ ಬೀದರನಲ್ಲಿ ವಿದ್ಯಾರ್ಥಿ ಜನಿವಾರ ಧರಿಸಿದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವುದಕ್ಕೆ ನಿರಾಕರಿಸಿದ ಘಟನೆಯನ್ನು ಶಾಸಕ ಶಿವರಾಮ ಹೆಬ್ಬಾರ್ ತೀವ್ರವಾಗಿ ರ‍್ಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಈ ದೇಶವು ವಿವಿಧ ಧರ್ಮ, ಸಂಪ್ರದಾಯ, ಧಾರ್ಮಿಕ ಚಿಹ್ನೆ, ಆಚರಣೆಗಳ ಗೌರವವನ್ನು ಮೂಲಭೂತ ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಯ ಧಾರ್ಮಿಕ ಗುರುತಿಗೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡದ್ದು ಸಂವಿಧಾನಾತ್ಮಕ ಮೌಲ್ಯಗಳ ವಿರೋಧವಾಗಿದೆ. ಸರಕಾರ ತಕ್ಷಣ ಈ ಘಟನೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥ ಪರೀಕ್ಷಾಧಿಕಾರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಹಾಗೂ ಪರೀಕ್ಷೆಯಿಂದ ವಂಚಿತನಾಗಿರುವ ವಿದ್ಯಾರ್ಥಿಗೆ ಮರು ಪರೀಕ್ಷೆ ಅವಕಾಶ ನೀಡಬೇಕು ಎಂದು ಆಗ್ರಹಿಸುತ್ತೇನೆ.
ಈ ವಿಷಯವನ್ನು ವಿಧಾನಸಭೆಯ ಅಧಿವೇಶದಲ್ಲಿ ಕೂಡ ಎತ್ತಿಹಿಡಿಯಲು ಸಿದ್ಧನಿದ್ದೇನೆ. ಇಂತಹ ಘಟನೆಗಳು ಪುನರಾವೃತ್ತಿಯಾಗದಂತೆ ವ್ಯವಸ್ಥೆಯ ಪುನರ್ ಪರಿಶೀಲನೆಯ ಅಗತ್ಯವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *