Breaking News

ವನ್ಯಜೀವಿ ಸಂರಕ್ಷಣಾ ಸಂಸ್ಥೆಯಿಂದ ವೈಟಿಎಸ್ಎಸ್ ನಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಪ್ರತಿಷ್ಟಿತ ವಿದ್ಯಾಸಂಸ್ಥೆ ವೈ.ಟಿ.ಎಸ್.ಎಸ್ ಸಭಾಭವನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ವನ್ಯಜೀವಿ ಸಂರಕ್ಷಣಾ ಸಂಸ್ಥೆಯೊಂದರ ಅಡಿಯಲ್ಲಿ ಮಾಹಿತಿ ಕಾರ್ಯಾಗಾರವನ್ನು ಜೂ.20 ರ ಗುರುವಾರ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಾಗಾರದಲ್ಲಿ ಪ್ರಸ್ತುತ ಸನ್ನಿವೇಶದಲ್ಲಿ ಪರಿಸರ ಸಂರಕ್ಷಣೆ, ವನ್ಯಜೀವಿಗಳ ಸಂರಕ್ಷಣೆ , ಅದರ ಮಹತ್ವ ಏನೆಂಬುದನ್ನು ವಿವರವಾಗಿ ತಿಳಿಸಲಾಯಿತು. ವಿಶೇಷವಾಗಿ ಹಾವಿನ ಸಂಕುಲದ ಸಂರಕ್ಷಣೆ ಮತ್ತು ಅದರಿಂದ ಅನಾಹುತ ಸಂಭವಿಸಿದಲ್ಲಿ ಪಡೆದುಕೊಳ್ಳಬೇಕಾದ ಪ್ರಥಮ ಚಿಕಿತ್ಸೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು.

ಅನಿಮಲ್ ವೆಲ್‌ಫೇರ್ ರೀಸರ್ಚ್ ಫೌಂಡೇಶನ್‌ನ ದತ್ತಾತ್ರೇಯ ನಾಗನಾಥ ಮುರ್ಕೋಟೆ, ಉಪಾಧ್ಯಕ್ಷ ಅಕ್ಬರ ಅಲಿ ಶೇಖ ಉಪನ್ಯಾಸ ನೀಡಿದರು. ಒಂದಾನುವೇಳೆ ಹಾವಿನ ಕಡಿತವಾದಲ್ಲಿ ಪ್ರಥಮ ಚಿಕಿತ್ಸೆಗೆ ತಕ್ಷಣಕ್ಕೆ ಸಂಪರ್ಕಿಸುವಂತೆ 7499439920 ಮತ್ತು 7483240263 ದೂರವಾಣಿ ಸಂಖ್ಯೆಗಳನ್ನು ನೀಡಲಾಯಿತು.
      ಈ ಸಂದರ್ಭದಲ್ಲಿ ವೈ.ಟಿ.ಎಸ್.ಎಸ್ ಪ್ರಾಂಶುಪಾಲ ಆನಂದ ಹೆಗಡೆ, ಉಪನ್ಯಾಸಕರಾದ ರವೀಂದ್ರ ಗಾಂವ್ಕರ, ಮನೋಹರ ಶಾನಭಾಗ , ಪರ್ವೀನ್‌ಬಾನು ಸುಂಕದ, ಶೈನಾಜ್ ಶೇಖ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *