Breaking News

ಯಲ್ಲಾಪುರ ವಿಶ್ವದರ್ಶನದಲ್ಲಿ ಆ.23ರಂದು ಉಚಿತ ಹೃದಯರೋಗ ತಪಾಸಣಾ ಶಿಭಿರ.


ಪ್ರತಿಧ್ವನಿ ಯಲ್ಲಾಪುರ : ಸದಾ ಒಂದಲ್ಲ ಒಂದು ಸಮಾಜಮುಖಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮನುಷ್ಯನ ಅತಿ ಪ್ರಮುಖ ಭಾಗವಾದ ಹೃದಯಕ್ಕೆ ಸಂಬಂಧಿಸಿದಂತೆ ಉಚಿತ ತಪಾಸಣ ಶಿಭಿರವನ್ನು ಆಗಸ್ಟ್ 23 ರ ಬೆಳಗ್ಗೆ 10 ಗಂಟೆಯಿಂದ ಹಮ್ಮಿಕೊಂಡಿದ್ದು ಸಾರ್ವಜನಿಕರು ಶಿಭಿರದ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ಮಾದ್ಯಮ ಪ್ರಕಟಣೆ ಹೊರಡಿಸಿದೆ.

ವಿಶ್ವದರ್ಶನ ಸೇವಾ ಹಾಗೂ ಹುಬ್ಬಳ್ಳಿಯ ವಿಹಾನ ಹಾರ್ಟ್ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯವರ ಸಹಯೋಗದಲ್ಲಿ ಉಚಿತ ಹೃದಯರೋಗ ತಪಾಸಣಾ ಶಿಬಿರ ಆಗಸ್ಟ್ 23ರಂದು ಬೆಳಗ್ಗೆ 10 ಗಂಟೆಯಿಂದ ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ‌ ಸಮೂಹದ ಆವಾರದಲ್ಲಿ ನಡೆಯಲಿದೆ.


ಶಿಬಿರದಲ್ಲಿ ಬಿಪಿ, ಇಸಿಜಿ, 2ಡಿ ಇಕೋ ಹಾಗೂ ಹೃದಯ ಸಂಬಂಧಿ ತಪಾಸಣೆಗಳನ್ನು ಉಚಿತವಾಗಿ ಮಾಡಲಾಗುವುದು. ಹೃದಯ ಸಂಬಂಧಿತ ಸಮಸ್ಯೆಗಳಿರುವವರು ಹಾಗೂ ತಪಾಸಣೆ ಮಾಡಿಸಿಕೊಳ್ಳಲು ಬಯಸುವವರು ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದು.
ಕಾರ್ಯಕ್ರಮದಲ್ಲಿ ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ,ಮಲೆನಾಡು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ. ಆರ್. ಹೆಗಡೆ, ಕುಂಬ್ರಿಗುಡ್ಡೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಭಟ್ ಹಾಸಣಗಿ, ಮದನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮಹೇಶ ದೇಸಾಯಿ, ಸಂಕಲ್ಪ ಸೇವಾ ಸಂಸ್ಥೆಯ ಕಾರ್ಯದರ್ಶಿ ಪ್ರಸಾದ ಹೆಗಡೆ, ವಿಶ್ವದರ್ಶನ ಸೇವಾದ ಸಂಯೋಜಕ ಶ್ರೀರಾಮ ಲಾಲಗುಳಿ ಉಪಸ್ಥಿತರಿರುವರು.
ಹೆಚ್ಚಿನ ಮಾಹಿತಿಗಾಗಿ 9483213106, 6366919550 ಸಂಪರ್ಕಿಸಬಹುದು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *