
ಪ್ರತಿಧ್ವನಿ ಯಲ್ಲಾಪುರ : ಸಂಸ್ಕೃತಿ ಮಹಿಳಾ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಯಲ್ಲಾಪುರ ಇದರ ೩ನೇ ವಾರ್ಷಿಕ ಸರ್ವಸಾಧಾರಣ ಸಭೆಯು ಪಟ್ಟಣದ ಅಡಿಕೆ ಭವನದಲ್ಲಿ ನಡೆಯಿತು.


ಸಹಕಾರಿ ಸಂಘದ ಗೌರವಾಧ್ಯಕ್ಷೆ ವರ್ಷಾ ಮಿರಾಶಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಿಮಾವತಿ ಭಟ್ ಹಾಗೂ ಕಣ್ಣಿನ ತಜ್ಞೆ ಸೌಮ್ಯಾ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯ ಮಿರಾಶಿ, ವಿಕಾಸ ಬ್ಯಾಂಕ್ ಅಧ್ಯಕ್ಷ ಮುರಳಿ ಹೆಗಡೆ, ಸಹಕಾರಿ ಸಂಘದ ಅಧ್ಯಕ್ಷೆ ಸವಿತಾ ನಾಯ್ಕ, ಉಪಾಧ್ಯಕ್ಷೆ ಗೀತಾ ಪಾವಸ್ಕರ್ ಸೇರಿದಂತೆ ಸಂಘದ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.






Prathidvani Yellapura