Breaking News

ಚುನಾವಣೆ ಬಿರುಸಿನಲ್ಲು ಕಾಂಗ್ರೆಸ್ ಕಾರ್ಯಕರ್ತರಿಂದ ತಂಗುದಾಣ ಸ್ವಚ್ಚತೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ-ಬೇಸಿಗೆಯ ರಜಾದಿನಗಳಲ್ಲಿ ಸುತ್ತ ಮುತ್ತಲಿನ ಪ್ರವಾಸೀ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಸ್ಥಳೀಯ ಬಸ್ ತಂಗುದಾಣಗಳನ್ನು ಹಾಳು ಮಾಡುತ್ತಿದ್ದಾರೆ. ಪ್ರವಾಸದ ನೆಪದಲ್ಲಿ ಬರುವ ಕೆಲವರು ಇಂತಹ ತಂಗುದಾಣಗಳಲ್ಲಿನ ಅಸಭ್ಯ ವರ್ತನೆ, ಸಾರ್ವಜನಿಕ ಸ್ಥಳದ ದುರುಪಯೋಗದಿಂದ ಸ್ಥಳೀಯ ನಾಗರಿಕರು ತಲೆತಗ್ಗಿಸುವಂತೆ ಮಾಡಿದೆ. ಹೊರಗಿನಿಂದ ಬರುವ ಪ್ರವಾಸಿಗರ ಮೇಲೆ ಸ್ಥಳೀಯ ಆಡಳಿತ ನಿಗಾವಹಿಸಬೇಕಿದೆ. ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಜ್ರಳ್ಳಿಯ ಟಿ.ಸಿ.ಗಾಂವ್ಕಾರ ಹೇಳಿದರು.

ಯಲ್ಲಾಪುರ ತಾಲ್ಲೂಕಿನ
ವಜ್ರಳ್ಳಿ ಸಮೀಪದ ಬೀಗಾರ್ ಕ್ರಾಸ್ ಬಳಿಯ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಹಮ್ಮಿಕೊಂಡ ಸ್ವಚ್ಚತಾ ಕಾರ್ಯದಲ್ಲಿ ಕಪಾಲ್ಗೊಂಡು ಮಾತನಾಡಿದ ಅವರು ಕೇಲವು ಪ್ರವಾಸಿಗರು ದುಶ್ಚಟಗಳ ದಾಸರಾಗಿದ್ದು ತಂಗುದಾಣ ಲ್ಲಿಯೇ ನಿಂತು ಕುಡಿದು, ತಿಂದು ಮೋಜು ಮಸ್ತಿ ಮಾಡಿ ನಿರುಪಯುಕ್ತ ಬಾಟಲಿ,ಪ್ಲಾಸ್ಟಿಕ್ ಕಸಗಳನ್ನು ಬಸ್ ತಂಗುದಾಣದೆದುರು ಚೆಲ್ಲಿ ಹೋಗುತ್ತಿದ್ದಾರೆ. ಹಳ್ಳಿಗಳಿಂದ ಪಟ್ಟಣಕ್ಕೆ ಹೋಗುವ ಸ್ಥಳೀಯರಿಗೆ ಕಿರಿಕಿರಿಯಾಗುತ್ತಿದೆ. ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸ್ಥಳೀಯರಾದ ನಾರಾಯಣ ಕೋಮಾರ, ಮಹೇಶ್ ಗಾಂವ್ಕರ್ ಸಾಂಬೇಕುಂಬ್ರಿ ಯವರು ಸೇರಿದಂತೆ ಅನೇಕ ಕಾಂಗ್ರೇಸ್ ಕಾರ್ಯಕರ್ತರು
ಸ್ವಚ್ಛತಾ ಕಾರ್ಯದಲ್ಲಿ ಕೈ ಜೋಡಿಸಿದರು.ಆ ಮೂಲಕ ಸಾಮಾಜಿಕ ಶುಚಿತ್ವ ದ ಜಾಗೃತಿ ಮೂಡಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *