Breaking News

ಕರ್ನಾಟಕ ರಾಜ್ಯ ಧನಗರ ಗೌಳಿ ಪ್ರೊ ಕಬ್ಬಡಿ ಸೀಸನ್ 2 ರಲ್ಲಿ ಸಿಂಧೆ ಸೋಲ್ಜರ್ಸ್ ಕರಡೊಳ್ಳಿ ತಂಡಕ್ಕೆ ತೃತೀಯ ಸ್ಥಾನ

ಯಲ್ಲಾಪುರ : ಕರ್ನಾಟಕ ರಾಜ್ಯ ಧನಗರ ಗೌಳಿ ಪ್ರೊ-ಕಬ್ಬಡ್ಡಿ ಸೀಸನ್-2 ರಲ್ಲಿ  ಪಾಂಡು ಭಾಗು ಸಿಂಧೆ ಇವರ ಮೊದಲ ವರ್ಷದ ಮಾಲೀಕತ್ವದಲ್ಲಿ ಹಾಗೂ ಧೂಳು ಸಿಂಧೆ (ಭಾರತೀಯ ಸೈನಿಕ ) ಇವರ ಅಧ್ಯಕ್ಷತೆಯಲ್ಲಿ ಮೂಡಿ ಬಂದಿರುವ ಸಿಂಧೆ ಸೋಲ್ಜರ್ಸ್ ಕರಡೊಳ್ಳಿ ತಂಡವು ದಿ 16,17 ಡಿಸೆಂಬರ್ 2024 ರಂದು ಕಿರವತ್ತಿ ಪ್ರೌಢ ಶಾಲೆ ಮೈದಾನದಲ್ಲಿ ನಡೆದ ರಾಜ್ಯ ಧನಗರ ಗೌಳಿ ಪ್ರೊಕಬ್ಬಡಿ ಸೀಸನ್-2 ರಲ್ಲಿ ತೃತೀಯ ಸ್ಥಾನ ಪಡೆದು ಜಯದ 3 ನೆ ಕಿರೀಟವನ್ನು ತನ್ನದಾಗಿಸಿಕೊಂಡಿದೆ.

ಈ ಮೂಲಕ ಯಲ್ಲಾಪುರ ತಾಲ್ಲೂಕಿಗೆ ಹಾಗೂ ಕರಡೊಳ್ಳಿ ಗ್ರಾಮಕ್ಕೆ ಗೌರವ ತಂದು ಕೊಟ್ಟಿರುತ್ತಾರೆ.ಈ ಸಂಬಂಧ ತಂಡದ ಸರ್ವ ಆಟಗಾರರಿಗೆ ಇನ್ನು ಮುಂದೆಯೂ ಸಹ ಹೆಚ್ಚಿನ ಯಶಸ್ಸು ಸಿಗಲಿ ತಾಲ್ಲೂಕಿನ ಹಾಗೂ ಗ್ರಾಮದ ಕೀರ್ತಿ ಪತಾಕೆಯನ್ನು ಇನ್ನು ಎತ್ತರಕ್ಕೆ ಹಾರಿಸುವಂತಾಗಲಿ ಎಂದು ಆಶಿಸುತ್ತಾ ಆಟಗಾರನ್ನು ಅಭಿನಂದಿಸಲಾಗಿದೆ. ಎಂದು ಕರಡೊಳ್ಳಿ ಯುವಕ ಹಾಗೂ ಕರ್ನಾಟಕ ರಾಜ್ಯ ಧನಗರ ಗೌಳಿ ಯುವಸೇನೆಯ ರಾಜ್ಯ ಖಜಾಂಚಿ ಲಕ್ಷ್ಮಣ ಕೊಕರೆ ತಿಳಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *