Breaking News

ಓದಿನಷ್ಟೇ ಕ್ರೀಡೆಗೂ ಮಹತ್ವ ನೀಡಬೇಕು – ಹರಿಪ್ರಕಾಶ್ ಕೋಣೆಮನೆ


ಪ್ರತಿಧ್ವನಿ ಯಲ್ಲಾಪುರ: ಓದಿನಷ್ಟೇ ಕ್ರೀಡಗೂ ಮಹತ್ವ ನೀಡುವ ಮೂಲಕ ವಿದ್ಯಾರ್ಥಿಗಳಲ್ಲಿದ್ದ ಪ್ರತಿಭೆಯನ್ನು ಗುರುತಿಸಬೇಕು ಎಂದು ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಹೇಳಿದರು.

ವಿಶ್ವದರ್ಶನ ಬಿಸಿಎ ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಿದರೂ ಅದನ್ನು ಚೆನ್ನಾಗಿ ಮಾಡುವ ತಂಡ ವಿಶ್ವದರ್ಶನದಲ್ಲಿ ಇರುವುದರಿಂದ ನಾವು ಯಶಸ್ವಿಯಾಗುತ್ತಿದ್ದೇವೆ . ಕ್ರೀಡಾ ಮನೋಭಾವದಿಂದ ಆಟವಾಡಬೇಕು ಕ್ರೀಡೆಯ ಮೂಲಕ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕು ಮುಂದಿನ ದಿನದಲ್ಲಿ ಇಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಕ್ರೀಡಾ ತರಬೇತಿ ನೀಡುತ್ತೇವೆ ಎಂದು ಹೇಳಿದರು.


ಪಂದ್ಯಾವಳಿ ಉದ್ಘಾಟಿಸಿದ ಅಂತರಾಷ್ಟ್ರೀಯ ಕ್ರೀಡಾಪಟು ಸಂತೋಷ ಮರಾಠೆ ಮಾತನಾಡಿ ಕ್ರಿಡಾಪಟು ಆಗುವುದು ಕಷ್ಟದ ಕೆಲಸ ಅದಕ್ಕೆ ನಿರಂತರ ಪರಿಶ್ರಮ ಬೇಕು. ಈ ಪಂದ್ಯಾವಳಿಯಲ್ಲಿ ಭಾಗವಹಿಸಿದವರು ಇಲ್ಲಿಗೆ ಮಾತ್ರವೇ ಸೀಮಿತವಾಗದೇ ಮುಂದೆ ಜಿಲ್ಲೆ ರಾಜ್ಯಮಟ್ಟದಲ್ಲಿ ಭಾಗವಹಿಸುವಂತಾಗ ಬೇಕು ಎಂದು ಹೇಳಿದರು.
ಪ್ರಥಮ ದರ್ಜೆ ಗುತ್ತಿಗೆದಾರ ಅಶೋಕ ನಾಯ್ಕ್, ಬಿಸಿಎ ಕಾಲೇಜಿನ ಪ್ರಾಂಶುಪಾಲ ಪ್ರಸನ್ನ ಭಟ್ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಸೀತಾರಾಮ ಗೌಡ ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದಲ್ಲಿ ಮುಗಿಲು ಮುಟ್ಟಿದ ಹಿಂದು ಧರ್ಮದ ಜಯಘೋಷ- ವಿಜ್ರಂಭಣೆಯಿಂದ ಜರುಗಿದ ಯುಗಾದಿ ಉತ್ಸವದ ಶೋಭಾಯಾತ್ರೆ.

ಪ್ರತಿಧ್ವನಿ ಯಲ್ಲಾಪುರ : ಹಿಂದು ಧರ್ಮದ ನೂತನ ವರ್ಷಾರಂಭ ಯುಗಾದಿ ಯಿಂದ ಪ್ರಾರಂಭ ಅದಕ್ಕೆ ಯಲ್ಲಾಪುರದಲ್ಲಿ ವಿಜ್ರಂಭಣೆಯ ಆಚರಣೆ ನಡೆಯುತ್ತಾ …

Leave a Reply

Your email address will not be published. Required fields are marked *