Breaking News

ಎಂ.ಎಲ್.ಸಿ ಶಾಂತಾರಾಮ್ ಸಿದ್ದಿ ಅವರಿಗೆ ಒಲಿದ  ಬಿಜೆಪಿಯ ರಾಷ್ಟ್ರೀಯ ಸ್ಥಾನ.

ಕೇಬಲ್ ನಾಗೇಶ್, ಯಲ್ಲಾಪುರ..🖋

ಪ್ರತಿಧ್ವನಿ ಯಲ್ಲಾಪುರ : ಭಾರತೀಯ ಜನತಾ ಪಾರ್ಟಿಯ ಎಸ್‌ಟಿ ಮೋರ್ಚಾದ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯ ಶಾಂತರಾಮ್ ಸಿದ್ದಿ ಆಯ್ಕೆಯಾಗಿದ್ದು ಅನೇಕ ಗಣ್ಯರು ಸಂಸದರು ಶುಭ ಕೋರಿದ್ದಾರೆ.

ಒಂದು ರಾಷ್ಟ್ರೀಯ ಪಕ್ಷದ ಅದರಲ್ಲು ಕೇಂದ್ರದಲ್ಲಿ ಈಗಾಗಲೆ ಅಧಿಕಾರದಲ್ಲಿ ಮುಂದುವರೆಯುತ್ತಿರುವ ಪಕ್ಷದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಲಭಿಸುವುದೆಂದರೆ ಹುಡುಗಾಟದ ಮಾತಲ್ಲ. ಈ ಸ್ಥಾನ ಲಭಿಸಲು ಪಕ್ಷಕ್ಕಾಗಿ ಹಗಲಿರುಳು ದುಡಿದು,ಸಂಘಟನೆಯ ಜವಾಬ್ದಾರಿ ಹೆಗಲಿಗೆ ಹೊತ್ತು ಅವಿರತವಾಗಿ ಶ್ರಮಿಸುತ್ತಾ. ರಾಷ್ಟ್ರ ನಾಯಕರ ಗಮನ ಸೆಳೆದು ಇಂತಹ  ಜವಾಬ್ದಾರಿ ಸ್ಥಾನ ಪಡೆಯಲು ಸಾಧನೆ ಇರಬೇಕು.


ವನವಾಸಿ,ಬುಡಕಟ್ಟು,ದಮನಿತರ ಧ್ವನಿಯಾಗಿ ಸರಳ ವ್ಯಕ್ತಿತ್ವ ಮತ್ತು ಪಕ್ಷ ನಿಷ್ಟೆ ಹಾಗು ಅವಿರತ ಶ್ರಮ ಪಕ್ಷದ ಅತ್ಯುನ್ನತ ಜವಾಬ್ದಾರಿ ಸ್ಥಾನ ಲಭಿಸಿದೆ.
  ಶಾಂತಾರಾಮ್ ಸಿದ್ದಿ ಅವರ ಸಮರ್ಥ ನೇತೃತ್ವದಲ್ಲಿ ಪಕ್ಷವು ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಸದೃಢವಾಗಿ ಬೆಳೆಯಲಿ ಹಾಗೂ ಮುಂಬರುವ ದಿನಗಳಲ್ಲಿ ಅವರು ಇನ್ನೂ ಉನ್ನತ ಜವಾಬ್ದಾರಿಗಳನ್ನು ಅಲಂಕರಿಸುವಂತಾಗಲಿ ಎಂದು ಆಶಿಸುತ್ತೇನೆ. ಜನಪರ ಕಾಳಜಿಯ ಅವರ ಈ ಯಶಸ್ವಿ ಪಯಣ ನಿರಂತರವಾಗಿ ಸಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತಾ ಅವರಿಗೆ ಶುಭ ಕೋರುತ್ತೇನೆ.
ವಿಶ್ವೇಶ್ವರ ಹೆಗಡೆ ಕಾಗೇರಿ
ಸಂಸದರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಸನಾತನ ಧರ್ಮದ ಸಂಸ್ಕಾರ ಮತ್ತು ಸಂಸ್ಕೃತಿ ಗಳನ್ನು ಉಳಿಸಿಕೊಂಡು ಮುಂದೆ ಸಾಗಬೇಕಿದೆ – ಹೆಬ್ಬಾರ್

ಪ್ರತಿಧ್ವನಿ ಯಲ್ಲಾಪುರ : ವೈದಿಕ ಪರಂಪರೆಗೆ ಬಹುದೊಡ್ಡ ಇತಿಹಾಸವಿದೆ. ವೇದ, ಉಪನಿಷತ್ತು, ಜ್ಯೋತಿಷ್ಯ, ಸಂಸ್ಕೃತ ಇವುಗಳ ಪರಿಪೂರ್ಣ ಅಧ್ಯಯನ ಮಾಡಿದವನಿಗೆ …

Leave a Reply

Your email address will not be published. Required fields are marked *