Breaking News

ಯಲ್ಲಾಪುರ ಪೊಲೀಸರಿಂದ ವಿದ್ಯಾರ್ಥಿಗಳಿಗೆ ಕಾನೂನು ಪಾಠ

ಪ್ರತಿಧ್ವನಿಯಲ್ಲಾಪುರ : ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತಿ ಮುಖ್ಯ. ಬೆಳೆಯುತ್ತಿರುವ ಜಗತ್ತಿನ ಜೊತೆಯಲ್ಲಿ ಹೊಸ ಹೊಸ ರೀತಿಯಲ್ಲಿ ಅಪರಾಧಗಳು ಬೆಳೆಯುತ್ತಿವೆ ಅದಕ್ಕೆ ಕಡಿವವಾಣ ಹಾಕಲೇಬೇಕು. ವಿಶೇಷವಾಗಿ ಹೆಣ್ಣು ಮಕ್ಕಳ ಸುರಕ್ಷತೆಗಾಗಿ ವಿಶೇಷ ಕಾನೂನು ಜಾರಿಯಲಿದ್ದು ಅವುಗಳ ಮಾಹಿತಿಯನ್ನು ವಿದ್ಯಾರ್ಥಿ ದಿಸೆಯಲ್ಲಿ ತಿಳಿದುಕೊಂಡರೆ ಭವಿಷ್ಯದಲ್ಲಿ ಉಪಯುಕ್ತವಾಗಲಿದೆ ಎಂದು ಯಲ್ಲಾಪುರ ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ರೇಖಾ ಹೇಳಿದರು.

ಅವರು ಪಟ್ಟಣದ ಮಾಡೆಲ್ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಹಮ್ಮಿಕೊಂಡು ಕಾನೂನಿನ ಅರಿವು ಮೂಡಿಸುವ ಕುರಿತು ಮಾತನಾಡಿದರು.

ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ  ಹಾಜರಿದ್ದ ಹೆಣ್ಣು ಮಕ್ಕಳಿಗೆ pocso ಕಾಯ್ದೆ, ಮಕ್ಕಳ ಸುರಕ್ಷತೆ, ಸೈಬರ್ ಅಪರಾಧಗಳು, ಸಂಚಾರಿ ನಿಯಮಗಳು, ಮೊಬೈಲ್ ಪರಿಣಾಮ, 112 ಬಗ್ಗೆ ತಿಳಿಸಿ ಜಾಗೃತಿ ಮೂಡಿಸುವ ಕಾರ್ಯವಾಯಿತು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವರ್ಗ ಯಲ್ಲಾಪುರ ಪೊಲೀಸ್ ಠಾಣ ಸಿಬ್ಬಂದಿ ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *