Breaking News

ಪ್ರಕರಣಗಳನ್ನು ಶೀಘ್ರಗತಿಯಲ್ಲಿ ಇತ್ಯರ್ಥ ಪಡಿಸಲು ಲೋಕ್ ಅಧಾಲತ್ ಯಶಸ್ವಿಗೊಳಿಸೋಣ – ಕುಮಾರ್ ಎಸ್, ನ್ಯಾಯಾಧೀಶರು ಯಲ್ಲಾಪುರ.

ಪ್ರತಿಧ್ವನಿ ಯಲ್ಲಾಪುರ : ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣ ಇತ್ಯರ್ಥ ಪಡಿಸಲು, ರಾಜಿ ಸಂಧಾನದ ಮೂಲಕ ಪ್ರಕರಣ ಬಗ್ಗೆ ಹರಿಸಿ ಸಾರ್ವಜನಿಕರ ಸಮಯ ಮತ್ತು ಆರ್ಥಿಕ ಹೊರೆ ತಪ್ಪಿಸಲು ಎಲ್ಲಾ ಇಲಾಖೆಗಳು ಸಹಕರಿಸಬೇಕು ಎಂದು ಮಾನ್ಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕುಮಾರ್ ಎಸ್ ಹೇಳಿದರು.

ಅವರು ದಿನಾಂಕ 19.9.2026 ರಂದು ನಡೆಯಲಿರುವ ಲೋಕ್ ಅದಾಲತ್ ಯಶಸ್ವಿಯಾಗಿಸುವ  ಬಗ್ಗೆ ಚರ್ಚಿಸಲು ಯಲ್ಲಾಪುರದ ನ್ಯಾಯಾಲಯದ ಆವರಣದಲ್ಲಿ ಪೂರ್ವಭಾವಿ ಸಭೆಕರೆದು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ವಕೀಲರ ಸಂಘದ ಅಧ್ಯಕ್ಷರಾದ  ವಿ.ಟಿ.ಭಟ್ ವಕೀಲರು, ಅಪರ ಸರ್ಕಾರಿ ವಕೀಲರಾದ  ಎನ್‌. ಟಿ.ಗಾಂವ್ಕಾರ್ ವಕೀಲರು  ಎನ್.ಕೆ. ಭಾಗವತ್ ವಕೀಲರು ಮತ್ತು ಸಹಾಯಕ ಸರ್ಕಾರಿ ಅಭಿಯೋಜಕಿ  ಝಿನತ್ ಬಾನು ಶೇಕ್ ಹಾಗೂ ಇತರ ನ್ಯಾಯವಾದಿಗಳು ಉಪಸ್ಥಿತರಿದ್ದರು.

ಎಲ್ಲಾ ಪಾನಲ್ ವಕೀಲರು ಹಾಗೂ ಪ್ಯಾರಾಲಿಗಲ್ ವ್ಯಾಲೆಂಟಿಯರ್ಸ್ ಹಾಗೂ ಪೊಲೀಸ್ ಅಧಿಕಾರಿಗಳು, ವಿವಿಧ ಬ್ಯಾಂಕುಗಳ ಹಾಗೂ ವಿವಿಧ ಸೊಸೈಟಿಗಳ ಅಧಿಕಾರಿಗಳು ,ಪಟ್ಟಣ ಪಂಚಾಯತ ,ತಾಲೂಕು ಪಂಚಾಯತ್ ಹಾಗು ಇತರ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವಕೀಲರ ಸಂಘದ ಅಧ್ಯಕ್ಷ ವಿ.ಟಿ.ಭಟ್ ರವರು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ಯಾನಲ್ ವಕೀಲೇ ಸರಸ್ವತಿ ಭಟ್ಟ ಸ್ವಾಗತಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *