Breaking News

ದ್ವಿತೀಯ ಪಿಯುಸಿ ಫಲಿತಾಂಶ ; ಯಲ್ಲಾಪುರ ಸ.ಪ.ಪೂ ಕಾಲೇಜಿಗೆ 97.28% ಫಲಿತಾಂಶ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಸರ್ಕಾರಿ ಪದವಿಪೂರ್ವ ಕಾಲೇಜು 2023 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 97.28% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 295 ವಿದ್ಯಾರ್ಥಿಗಳಲ್ಲಿ 287 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 100 % ಫಲಿತಾಂಶ ದಾಖಲಾಗಿದ್ದು 54 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದಾರೆ. ವಿಘ್ನೇಶ ನಾಯ್ಕ 600 ಕ್ಕೆ 551 ಅಂಕಗಳಿಸಿ ಪ್ರಥಮ, 541 ಅಂಕಗಳೊಂದಿಗೆ ಸಂಕೇತ ವೆಂಕಟರಮಣ ಭಟ್ಟ ದ್ವಿತೀಯ, ರಾಹುಲ ಈರಾಚಂದ ಜಾದನ 529 ಅಂಕಗಳೊಂದಿಗೆ ತೃತೀಯ ಸ್ಥಾನದಲ್ಲಿದ್ದಾರೆ.


ಕಲಾ ವಿಭಾಗದಲ್ಲಿ 96.75% ಫಲಿತಾಂಶ ದಾಖಲಾಗಿದ್ದು 123 ವಿದ್ಯಾರ್ಥಿಗಳಲ್ಲಿ 119 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಂಜುಳಾ ದೋಂಡು ಬರಾಗಡೆ 600 ಕ್ಕೆ 559 ಅಂಕಗಳಿಸಿ ಪ್ರಥಮ, 547 ಅಂಕಗಳೊಂದಿಗೆ ಸುಜನ ಸುಬ್ರಾಯ ಮಳಿಕ ದ್ವಿತೀಯ, ಸ್ವಾತಿ ನಾಯಕ್ 546 ಅಂಕಗಳೊಂದಿಗೆ ತೃತೀಯ ಸ್ಥಾನದಲ್ಲಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 96.61℅ ಫಲಿತಾಂಶ ದಾಖಲಾಗಿದ್ದು 118 ವಿದ್ಯಾರ್ಥಿಗಳಲ್ಲಿ 114 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಭಾವನಾ ಮಂಜುನಾಥ ಗುಮ್ಮಾನಿ 572 ಅಂಕಗಳೊಂದಿಗೆ ಪ್ರಥಮ, 566 ಅಂಕಗಳೊಂದಿಗೆ ರಜಿತ್ ಲೋಕೇಶ ಪಟಗಾರ ದ್ವಿತೀಯ, 565 ಅಂಕಗಳೊಂದಿಗೆ ಚಿನ್ಮಯ ಕೃಷ್ಣ ಪಟಗಾರ ತೃತೀಯ ಸ್ಥಾನ ಗಳಿಸಿದ್ದು ಪ್ರಾಂಶುಪಾಲರು, ಅದ್ಯಾಪಕ ವೃಂದ, ಹಾಗೂ ಊರ ನಾಗರೀಕರು ಪ್ರಶಂಶಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *