Breaking News

ಜೋಡುಕೆರೆಯಲ್ಲಿನ ಮೊಸಳೆ ರಾತ್ರಿ ವೇಳೆಯಲ್ಲಿ ದಡಕ್ಕೆ ಬರುತ್ತಿರುವುದು ಸ್ಥಳೀಯರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದೆ.


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಜೋಡುಕೆರೆಯಲ್ಲಿ ಕೆಲವು ತಿಂಗಳ ಹಿಂದೆ ಮೊಸಳೆಯೊಂದು ಕಾಣಿಸಿದ್ದು ನಂತರ ಅರಣ್ಯ ಇಲಾಖೆಯ ಗಮನಕ್ಕೆ ತಂದು ದಾಂಡೇಲಿಗೆ ಸಾಗಿಸುವ ಪ್ರಯತ್ನ ಸಾಗಿತ್ತು. ಆದರೆ ಸಾದ್ಯವಾಗಿರಲಿಲ್ಲ ಜಾತ್ರೆ ಸಂದರ್ಭದಲ್ಲಿ ಬೋನ್ ಇರಿಸಿ ಮೊಸಳೆ ಹಿಡಿಯುವ ಪ್ರಯತ್ನ ಸಾಗಿತ್ತು ಆದರೆ ಅದುಕೂಡ ವಿಫಲವಾಯಿತು ಇದೀಗ ರಾತ್ರಿ ವೇಳೆಯಲ್ಲಿ ದಡದ ಮೇಲೆ ಬಂದಿರುವ ಮೊಸಳೆಯ ವಿಡಿಯೋ ಸ್ಥಳೀಯ ಒಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದ್ದು ವೈರಲ್ ಆಗುತ್ತಿದೆ.

ಮೊಸಳೆ ವಿಡಿಯೋ ಕ್ಲಿಪ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅರಣ್ಯ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಮೊಸಳೆ ಹಿಡಿಯುವ ನುರಿತ ತಜ್ಞರನ್ನು ಕರೆಸಿ ಹಿಡಿಯುವ ಕಾರ್ಯ ಆಗಬೇಕಿದೆ. ಇಲ್ಲವಾದಲ್ಲಿ ಇದೇ ರಸ್ತೆಯಲ್ಲಿ ನಡೆದಾಡುವ ಹಿರಿಯರು,ಮಕ್ಕಳು ಭಯದ ಆತಂಕದಲ್ಲೆ ಸಂಚರಿಸಬೇಕಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಿಜೆಪಿ ವತಿಯಿಂದ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ..

ಪ್ರತಿಧ್ವನಿ ಯಲ್ಲಾಪುರ: ಭಾರತದ ಸಂವಿಧಾನ ಶಿಲ್ಪಿ,ಸಾಮಾಜಿಕ ನ್ಯಾಯದ ಹರಿಕಾರರು,ಶೋಷಿತರ ದ್ವನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಭಾರತೀಯ ಜನತಾ ಪಾರ್ಟಿ …

Leave a Reply

Your email address will not be published. Required fields are marked *