Breaking News

ಜನರ ಧ್ವನಿಯನ್ನು ಆಡಳಿತದ ಗಮನಕ್ಕೆ ತಲುಪಿಸುವ ಮಹತ್ತರ ಜವಾಬ್ದಾರಿ ಪತ್ರಕರ್ತರು ನಿಭಾಯಿಸುತ್ತಿದ್ದಾರೆ – ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಸಮಾಜದಲ್ಲಿ ಜಾಗೃತಿ ಮೂಡಿಸುವ ಹಾಗೂ ಜನರ ಧ್ವನಿಯನ್ನು ಆಡಳಿತದ ಗಮನಕ್ಕೆ ತಲುಪಿಸುವ ಮಹತ್ತರ ಜವಾಬ್ದಾರಿಯನ್ನು ಪತ್ರಕರ್ತರು ಸಮರ್ಥವಾಗಿ ನಿರ್ವಹಿಸುತ್ತಿರುವುದು‌ ಶ್ಲಾಘನೀಯ ಕಾರ್ಯ ‌ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಮಂಗಳವಾರ ಸವಣಗೇರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ವೇದಿಕೆ ಕಾರ್ಯಕ್ರಮಕ್ಕು ಮೊದಲು ಸವಣಗೇರಿ ಶಾಲೆ ಆವರಣದಲ್ಲಿ ವನಮಹೋತ್ಸವ ನಿಮಿತ್ತ ಶಾಸಕ ಹೆಬ್ಬಾರ್ ಸಸು ನೆಟ್ಟು ನೀರೆರೆದರು.

ವೇದಿಕೆಯಲ್ಲಿ ಹಿರಿಯ ಪತ್ರಕರ್ತರಾದ ಕೆ.ಎಸ್.ಭಟ್,ನರಸಿಂಹ ಸಾತೊಡ್ಡಿ,ನಾಗೇಂದ್ರ ಯಲ್ಲಾಪುರ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಕಲ್ಪ ಸಂಸ್ಥೆ ಪ್ರಮುಖ ಪ್ರಮೋದ್ ಹೆಗಡೆ, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಆರ್.ಎಸ್.ಭಟ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವ್ ಕುಮಾರ್ ಹೊಸ್ಕೆರಿ ,ಪತ್ರಕರ್ತ ಸಂಘದ ಅಧ್ಯಕ್ಷ ಸುಬ್ರಾಯ ಬಿದ್ರೇಮನೆ, ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷ ನರಸಿಂಹ ಅಡಿ, ಲಯನ್ಸ್ ಅಧ್ಯಕ್ಷ ಶೇಷಗಿರಿ ಪ್ರಭು, ಶಮಾ ಗ್ಯಾಸ್ ಮಾಲಿಕ ಶೇಖ್,ಎಸ್ ಡಿ.ಎಂ.ಸಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ , ಉಪಾಧ್ಯಕ್ಷೆ ಶಿಲ್ಪಾರವಿ ನಾಯ್ಕ್, ಸದಸ್ಯ ರವಿ ನಾಯ್ಕ್,   ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಶ್ರೀಧರ್ ಅಣಲಗಾರ ಪ್ರಮುಖರಾದ ವಿಜಯ್ ಕುಮಾರ್ ನಾಯ್ಕ್, ಜಯರಾಜ್ ಗೋವಿ,ಪ್ರಭಾವತಿ ಜಯರಾಜ್ ದತ್ತಾತ್ರೇಯ ಕಣ್ಣೀಪಾಲ್, ಪದಾಧಿಕಾರಿಗಳು, ಪತ್ರಕರ್ತರು, ವಿವಿಧ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *