Breaking News

ಮಂಚಿಕೇರಿ ಗ್ರಾಮೀಣ ಭಾಗದ ಟ್ಯೂಷನ್ ಸೆಂಟರ್ ವಿಧ್ಯಾರ್ಥಿನಿ ನವೋದಯದ ಶಾಲೆಗೆ ಆಯ್ಕೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ – ತಾಲೂಕಿನ ಮಂಚಿಕೇರಿ ಗ್ರಾಮದಲ್ಲಿ ಗ್ರಾಮೀಣ ಭಾಗದ ಮಕ್ಕಳಿಗಾಗಿ ನಡೆಸುತ್ತಿದ್ದ ” ಮಂಚಿಕೇರಿ ಟ್ಯೂಷನ್ ಸೆಂಟರ್” ನ ವಿದ್ಯಾರ್ಥಿನಿ ಅನನ್ಯ ಅಶೋಕ ನಾಯ್ಕ್ ನವೋದಯ ಪ್ರವೇಶ ಪರೀಕ್ಷಯಲ್ಲಿ ಆಯ್ಕೆಯಾಗಿದ್ದು ಸೈ ಎನಿಸಿಕೊಂಡಿದ್ದಾಳೆ.
ನವೋದಯ ಶಾಲೆಗೆ ಸೇರಲು ತಾಲೂಕಿನಿಂದ ನಾಲ್ಕು ವಿದ್ಯಾರ್ಥಿಗಳಿಗೆ ಅವಕಾಶವಿದ್ದು 600 ಕ್ಕು ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಅದರಲ್ಲಿ ಆಯ್ಕೆಯಾದ ನಾಲ್ಕು ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಭಾಗದ ಮಂಚಿಕೇರಿಯ ಅನನ್ಯ ನಾಯ್ಕ್ ಒಬ್ಬಳಾಗಿದ್ದಾಳೆ. ಇದಕ್ಕೆಲ್ಲಾ ಟ್ಯೂಷನ್ ನೀಡುತ್ತಿದ್ದ ಯಲ್ಲಾಪುರ ಪ್ರತಿಷ್ಠಿತ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯ ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಸಚಿನ್ ನಾಯ್ಕ್ ಮಾರ್ಗದರ್ಶನ ಕಾರಣವಾಗಿದ್ದು ಸಂತಸ ತಂದಿದೆ. ವಿದ್ಯಾರ್ಥಿನಿ ಪೋಷಕರಾದ ಅಶೋಕ್ ಪರಮೇಶ್ವರ ನಾಯ್ಕ್ ಮತ್ತು ವಿಮಲ ಅಶೋಕ ನಾಯ್ಕ ಸಂತಸಗೊಂಡಿದ್ದಾರೆ. ಅನನ್ಯ ನಾಯ್ಕ್ ಸ್ಥಳೀಯ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಎಂಬುದು ಗಮನಾರ್ಹವಾಗಿದೆ. ಇದರಿಂದ ಗ್ರಾಮಸ್ಥರಿಗು ಸಂತಸವಾಗಿದ್ದು ವಿದ್ಯಾರ್ಥಿನಿಯ ಭವಿಷ್ಯ ಉಜ್ವಲ ವಾಗಲೆಂದು ಹಾರೈಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *